Wednesday, August 10, 2022

Latest Posts

ನಾಳೆಯಿಂದ 2020-21 ಸಾಲಿನ ಪಿಯುಸಿಗೆ ವಿದ್ಯಾರ್ಥಿಗಳ ದಾಖಲಾತಿ ಆರಂಭ: ರಾಜ್ಯ ಶಿಕ್ಷಣ ಇಲಾಖೆ ಆದೇಶ

ಬೆಂಗಳೂರು: ನಾಳೆಯಿಂದ ಪಿಯುಸಿಗೆ ವಿದ್ಯಾರ್ಥಿಗಳ ದಾಖಲಾತಿ ಆರಂಭ ಮಾಡಿಕೊಳ್ಳುವಂತೆ ರಾಜ್ಯದ ಎಲ್ಲಾ ಪದವಿ ಪೂರ್ವ ಕಾಲೇಜುಗಳಿಗೆ ರಾಜ್ಯ ಶಿಕ್ಷಣ ಇಲಾಖೆ ಆದೇಶ ನೀಡಿದೆ.
2020-21 ಸಾಲಿನ ಪಿಯುಸಿಗೆ ದಾಖಲಾತಿಗಳನ್ನು ಮಾಡಿಕೊಳ್ಳುವಂತೆ ರಾಜ್ಯ ಪದವಿ ಪೂರ್ವ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದ್ದು, ಇದೇ ವೇಳೆ ನಾಳೆಯಿಂದ ನಾಲ್ಕು ದಿನ ಅರ್ಜಿ ನೀಡುವಂತೆ ತಿಳಿಸಿದೆ .
ಕೊರೋನಾ ಹಿನ್ನಲೆಯಲ್ಲಿ ಖಾಸಗಿ ಕಾಲೇಜುಗಳು ಸೇರಿದಂತೆ ಎಲ್ಲಾ ಕಾಲೇಜುಗಳಿಗೆ ಕಡಿಮೆ ಶುಲ್ಕವನ್ನು ಪಡೆದುಕೊಳ್ಳುವಂತೆ ಸೂಚನೆ ನೀಡಿದ್ದು, ಕಳೆದ ಬಾರಿ ಶುಲ್ಕಕ್ಕಿಂತ ಈ ಬಾರಿ ಶುಲ್ಕವನ್ನು ಕಡಿಮೆ ಪ್ರಮಾಣದಲ್ಲಿ ತೆಗದುಕೊಳ್ಳುವಂತೆ ಸೂಚನೆಯನ್ನು ನೀಡಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss