Thursday, July 7, 2022

Latest Posts

ನಾಳೆಯಿಂದ 24 ರವರೆಗೆ ಧಾರವಾಡ ಜಿಲ್ಲೆಯಲ್ಲಿ ಲಾಕ್‌ಡೌನ್: ಅಗತ್ಯ ವಸ್ತುಗಳ ಮಾರಾಟಕ್ಕೆ ಅವಕಾಶ

ಧಾರವಾಡ: ಜು.15ರಿಂದ 24 ರವರೆಗೆ ಜಿಲ್ಲೆಯಲ್ಲಿ ಜಾರಿ ಮಾಡಿರುವ ಲಾಕ್‌ಡೌನ್ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸುವ ಮೂಲಕ ಜಿಲ್ಲೆಯ ಸಾರ್ವಜನಿಕರು ಲಾಕ್‌ಡೌನ್ ಯಶಸ್ವಿಗೊಳಿಸಲು ಸಹಕಾರ ನೀಡಬೇಕು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದರು.
ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಲಾಕ್‌ಡೌನ್ ವೇಳೆ ಅನಗತ್ಯ ಅಡ್ಡಾಡುವುದು, ಖಾಸಗಿ ವಾಹನ ಸಂಚಾರ, ಜಿಲ್ಲೆಯ ಹೊರಗಡೆ ಪ್ರಯಾಣ, ಹೊರ ಜಿಲ್ಲೆಗಳಿಂದ ಜಿಲ್ಲೆಗೆ ಆಗಮಿಸುವುದನ್ನು (ಸೇವಾಸಿಂಧು ಮೂಲಕ ಅರ್ಜಿ ಸಲ್ಲಿಸದೇ) ಸಂಪೂರ್ಣ ನಿಷೇಧಿಸಿದೆ ಎಂದರು.
ಲಾಕ್‌ಡೌನ್ ಸಮಯದಲ್ಲಿ ಅಗತ್ಯ ವಸ್ತುಗಳ ಖರೀದಿಗೆ, ಅಗತ್ಯ ಸೇವೆ, ಸರಕು ಮತ್ತು ವಹಿವಾಟುಗಳಿಗೆ ನಿರ್ಧಿಷ್ಟ ಸಮಯ ನಿಗದಿಪಡಿಸಿದೆ. ನಿತ್ಯ ಬೆಳಿಗ್ಗೆ 5ರಿಂದ ಮಧ್ಯಾಹ್ನ 12ರವರೆಗೆ ಎಲ್ಲ ಕಿರಾಣಿ, ದಿನಸಿ, ಹಾಲು, ತರಕಾರಿ, ಹಣ್ಣು, ಮಾಂಸ ಮಾರಾಟಕ್ಕೆ ಅವಕಾಶ ಕಲ್ಪಿಸಿದ ಬಗ್ಗೆ ಮಾಹಿತಿ ನೀಡಿದರು.
ಕೃಷಿ, ತೋಟಗಾರಿಕೆ ಸಂಬ0ಧಿಸಿದ0ತೆ ಎಲ್ಲ ಬೀಜ, ರಸಗೊಬ್ಬರ ಮಾರಾಟಕ್ಕೆ ಅವಕಾಶ ನೀಡಿದೆ. ಕೃಷಿ-ತೋಟಗಾರಿಕೆ ಪೂರಕ ಚಟುವಟಿಕೆಗಳಿಗೆ ಅನುಮತಿ ನೀಡಿದೆ. ಪ್ರತಿ ಸ್ಥಳದಲ್ಲಿ ಜನರು ಮಾಸ್ಕ್, ಸ್ಯಾನಿಟೈಸರ್ ಮತ್ತು ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು ಕಡ್ಡಾಯ. ಗುಂಪು ಸೇರುವುದನ್ನು ನಿಷೇಧಿಸಲಾಗಿದೆ ಎಂದರು.
ವೈದ್ಯಕೀಯ ಸಂಬ0ಧಿಸಿದ0ತೆ ಆಸ್ಪತ್ರೆ, ಔಷಧ ಅಂಗಡಿಗಳು ದಿನನಿತ್ಯದಂತೆ ಕಾರ್ಯನಿರ್ವಹಿಸಲಿವೆ. ಲಾಕ್‌ಡೌನ್ ವೇಳೆ ಸಾರ್ವಜನಿಕ ಹಾಗೂ ಖಾಸಗಿ ಬಸ್‌ಗಳ ಸಾರಿಗೆ ಸಂಚಾರ ಸಂಪೂರ್ಣ ಬಂದ್ ಮಾಡಲಾಗಿದೆ. ಆಟೋ, ಕ್ಯಾಬ್ ಸೇರಿ ಇತರೆ ವಾಹನಗಳ ಓಡಾಟವನ್ನು ನಿರ್ಬಂಧಿಸಲಾಗಿದೆ ಎಂದು ತಿಳಿಸಿದರು.
ದೇವಸ್ಥಾನ, ಚರ್ಚ್, ಮಸೀದಿಗಳನ್ನು ಜು.24 ರವರೆಗೆ ಮುಚ್ಚಲು ಆದೇಶಿಸಲಾಗಿದೆ. ಯಾವುದೇ ರೀತಿಯ ಗುಂಪು ಸೇರುವುದು, ಸಾಮೂಹಿಕ ಪ್ರಾರ್ಥನೆಗಳನ್ನು ನಿಷೇಧಿಸಿದೆ. 65 ವರ್ಷ ಮೇಲ್ಪಟ್ಟ ವೃದ್ಧರು, 10 ವರ್ಷದೊಳಗಿನ ಮಕ್ಕಳು, ಗರ್ಭಿಣಿಯರು ಮನೆಯಿಂದ ಹೊರಗಡೆ ಬರದಂತೆ ಮನವಿ ಮಾಡಿದರು.
ಯಾವುದೇ ವಸ್ತುಗಳನ್ನು ಖರೀದಿಸಲು ಒಂದು ಕುಟುಂಬದಿ0ದ ಒಬ್ಬರೇ ಬಂದರೆ ಸಾಕು. ಉಳಿದವರು ಮನೆಯಲ್ಲೇ ಇರಲಿ.
ಪರಸ್ಪರ ಸಾಮಾಜಿಕ ಅಂತರ, ಮಾಸ್ಕ್ ಬಳಸಬೇಕು. ದಿನನಿತ್ಯದ ವಸ್ತುಗಳನ್ನು ಪ್ರತ್ಯೇಕವಾಗಿ ಬಳಸುವುದು ಹೆಚ್ಚು ಸೂಕ್ತ ಎಂದು ಹೇಳಿದರು.
ಸುದ್ದ್ಧಿಗೋಷ್ಠಿಯಲ್ಲಿ ಜಿಪಂ ಸಿಇಓ ಡಾ.ಬಿ.ಸಿ. ಸತೀಶ್ ಇದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss