ಹೊಸದಿಲ್ಲಿ: ಕೇಂದ್ರ ಮಾನವ ಸಂಪನ್ಮೂಲ ಸಚಿವಾಲಯವು ಮೇ.5ರಂದು ನೀಟ್ ಮತ್ತು ಜಿಇಇ ನೂತನ ದಿನಾಂಕ ಪ್ರಕಟಿಸಲಿದೆ.
ವೈದ್ಯಕೀಯ ಹಾಗೂ ಇಂಜಿನಿಯರಿಂಗ್ ವಿದ್ಯಾರ್ಥಿಗಳು ನಿಟ್ಟುಸಿರು ಬಿಡುವಂತಾಗಿದೆ. ಕೊರೋನಾ ಲಾಕ್ ಡೌನ್ ಹಿನ್ನಲೆಯಲ್ಲಿ ಮುಂದೂಡಲಾಗಿದ್ದ ನೀಟ್ ಹಾಗೂ ಜೆಇಇ ಪರೀಕ್ಷೆಗಳ ದಿನಾಂಕ ನಾಳೆ ಪ್ರಕಟವಾಗಲಿದೆ.
ನಾಳೆ ಕೇಂದ್ರ ಮಾನವ ಸಂಪನ್ಮೂಲ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂತ್ ನೂತನ ದಿನಾಂಕ ಘೋಷಿಸಿ, ಅವರು ವಿದ್ಯಾರ್ಥಿಗಳ ಜತೆ ಚರ್ಚೆ ನಡೆಸಲಿದ್ದಾರೆ.