Sunday, August 14, 2022

Latest Posts

ನಾಳೆ ರಾಜ್ಯಾದ್ಯಂತ ಸರ್ಕಾರಿ ಬಸ್ ಸಂಚಾರ: ಸಾರ್ವಜನಿಕ ಆಸ್ತಿ ನಾಶ ಮಾಡಿದರೆ ಕಠಿಣ ಕ್ರಮ: ಡಿಸಿಎಂ ಲಕ್ಷ್ಮಣ್ ಸವದಿ

ಬೆಂಗಳೂರು: ರಾಜ್ಯದಲ್ಲಿ ಅನೇಕ ಸಂಘಟನೆಗಳು ಬಂದ್ ಗೆ ಕರೆಕೊಟ್ಟಿದ್ದು, ಜನರ ಹಿತದೃಷ್ಟಿಯಿಂದ ರಾಜ್ಯಾದ್ಯಂತ ಸರ್ಕಾರಿ ಬಸ್ ಸಂಚಾರದಲ್ಲಿ ಯಾವುದೇ ವ್ಯತ್ಯಾಸವಾಗುವುದಿಲ್ಲ ಎಂದು ಡಿಸಿಎಂ ಹಾಗೂ ಸಾರಿಗೆ ಸಚಿವರೂ ಆದ ಲಕ್ಷ್ಮಣ್ ಸವದಿ ತಿಳಿಸಿದ್ದಾರೆ.

ಬಂದ್ ವೇಳೆಯಲ್ಲಿ ಯಾವುದೇ ರೀತಿಯ ಸರ್ಕಾರಿ ಆಸ್ತಿಪಾಸ್ತಿಗಳಿಗೆ ಹಾನಿಯಾಗದಂತೆ ಸಕಲ ಮುಂಜಾಗ್ರತ ಕ್ರಮ ಕೈಗೊಳ್ಳಲು ಸೂಚಿಸಿದರು. ಸಾರ್ವಜನಿಕ ಆಸ್ತಿಪಾಸ್ತಿಗಳಿಗೆ ಹಾನಿ ಮಾಡಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

ರಾಜ್ಯಾದ್ಯಂತ ನಾಳೆ ಎಂದಿನಮಥೆ ಬಿಎಂಟಿಸಿ, ಕೆಎಸ್ ಆರ್ ಟಿಸಿ, ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ, ಈಶಾನ್ಯ ಕರ್ನಾಟಕ ಸಾರಿಗೆ ಸಂಚಾರ ನಡೆಸಲಿದೆ ಎಂದು ತಿಳಿಸಿದರು.

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss