ಹೊಸ ದಿಗಂತ ಆನ್ ಲೈನ್ ಡೆಸ್ಕ್
ರಸ್ತೆ ಬದಿಯಲ್ಲಿ ನಿಂತಿದ್ದ ಕ್ಯಾಂಟರ್ ಗೆ ಹಿಂದಿನಿಂದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟಿದ್ದಾರೆ.
ಈ ಘಟನೆ ಚಿತ್ರದುರ್ಗ ತಾಲೂಕಿನ ಮೇಟಿಕುರ್ಕಿ ಬಳಿಯ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಕುಮಾರ್ (24), ವಿಜಯ್ (28) ಮೃತರು. ಅಪಘಾತದಲ್ಲಿ ಮೂವರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಶನಿವಾರ ತಡ ರಾತ್ರಿ ರಸ್ತೆ ಬದಿ ಕ್ಯಾಂಟರ್ ನಿಲ್ಲಿಸಿ ಟೀ ಕುಡಿಯುತ್ತಿದ್ದ ವೇಳೆ ಹಿಂದಿನಿಂದ ಬಂದ ಲಾರಿ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ.
ಗಾಯಾಳುಗಳನ್ನು ಹಿರಿಯೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಹಿರಿಯೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.