Wednesday, June 29, 2022

Latest Posts

ನಿಗಮ ಮಂಡಳಿಗಳ ಅಧ್ಯಕ್ಷ ಸ್ಥಾನ ಭರ್ತಿ ಮಾಡಿದ ರಾಜ್ಯ ಸರಕಾರ: ನಟಿ ತಾರಾಗೂ ಒಲಿದ ಪಟ್ಟ

ಹೊಸದಿಗಂತ ಆನ್ ಲೈನ್ ಡೆಸ್ಕ್:

ರಾಜ್ಯ ಸರ್ಕಾರ ಖಾಲಿಯಿರುವ ನಿಗಮ ಮಂಡಳಿಗಳ ಅಧ್ಯಕ್ಷ ಸ್ಥಾನವನ್ನು ಭರ್ತಿ ಮಾಡಿದೆ. ನಿನ್ನೆ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಸಭೆ ನಡೆಸಿದ ಬೆನ್ನಲ್ಲೇ ಇಂದು ನಿಗಮ ಮಂಡಳಿಗಳ ಅಧ್ಯಕ್ಷ ಸ್ಥಾನದ ಪಟ್ಟಿ ಅಂತಿಮ ರೆಡಿಯಾಗಿದೆ.
ನಟಿ ತಾರಾ ಅನುರಾಧಾಗೆ ಲಕ್ ಕುದುರಿದ್ದು, ಅರಣ್ಯ ಅಭಿವೃದ್ದಿ ನಿಗಮದ ಅಧ್ಯಕ್ಷ ಸ್ಥಾನ ನೀಡಲಾಗಿದೆ.
ತಿಪಟೂರಿನ ಶಾಸಕ ಬಿ.ಸಿ.ನಾಗೇಶ್​ಗೆ ಕಾರ್ಮಿಕ ಕಲ್ಯಾಣ ಮಂಡಳಿ ಅಧ್ಯಕ್ಷ ಸ್ಥಾನ ನೀಡಲಾಗಿದೆ. ಶಿರಾ ಕ್ಷೇತ್ರದ ಬಿ.ಕೆ. ಮಂಜುನಾಥ್​​​ಗೆ ನಾರು ಅಭಿವೃದ್ಧಿ ಮಂಡಳಿ ಅಧ್ಯಕ್ಷ ಸ್ಥಾನ, ಶಿರಾ ಕ್ಷೇತ್ರದ ಎಸ್.ಆರ್.ಗೌಡಗೆ ಕರ್ನಾಟಕ ರೇಷ್ಮೆ ಉದ್ಯಮಗಳ ನಿಗಮ ನಿಯಮಿತದ ಅಧ್ಯಕ್ಷ ಸ್ಥಾನ, ಕೆ.ವಿ. ನಾಗರಾಜ್​​ಗೆ ಕರ್ನಾಟಕ ರಾಜ್ಯ ಮಾವು ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಗಮ ನಿಯಮಿತದ ಅಧ್ಯಕ್ಷ ಸ್ಥಾನ, ಸವಿತಾ ವಿಶ್ವನಾಥ್ ಅಮರ್ ಶೆಟ್ಟಿಗೆ ಕರ್ನಾಟಕ ರೇಷ್ಮೆ ಮಾರಾಟ ಮಂಡಳಿ ನಿಯಮಿತದ ಅಧ್ಯಕ್ಷ ಸ್ಥಾನ, ಚಂದು ಪಾಟೀಲ್​​ಗೆ ನವೀಕರಿಸಬಹುದಾದ ಇಂಧನ ನಿಗಮದ ಅಧ್ಯಕ್ಷ ಸ್ಥಾನ, ತಿಪ್ಪೇಸ್ವಾಮಿಗೆ ಕಾಡಾ ನಿಗಮದ ಅಧ್ಯಕ್ಷ ಸ್ಥಾನ, ಚಿಕ್ಕನಾಯಕನಹಳ್ಳಿಯ ಕಿರಣ್ ಕುಮಾರ್​ಗೆ ಜೈವಿಕ ತಂತ್ರಜ್ಞಾನ ‌ನಿಗಮದ ಅಧ್ಯಕ್ಷ ಸ್ಥಾನ ನೀಡಲಾಗಿದೆ. ಈ ಮೂಲಕ ಸಂಪುಟಕ್ಕೆ ಸರ್ಜರಿ ವೇಳೆ ಬರಬಹುದಾಗಿದ್ದ ಅಪರಸ್ವರಕ್ಕೆ ಕಡಿವಾಣ ಹಾಕಿದೆ ಎನ್ನಲಾಗುತ್ತಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss