Friday, July 1, 2022

Latest Posts

ನಿಗಮ ಸ್ಥಾಪನೆ ಸ್ವಾಗತಾರ್ಹ; ಸಮಾಜವನ್ನು 2ಎ ವರ್ಗಕ್ಕೂ ಸೇರಿಸಲಿ: ಮಹಾಸಭಾ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಆಗ್ರಹ

ಹೊಸ ದಿಗಂತ ವರದಿ, ದಾವಣಗೆರೆ:

ರಾಜ್ಯ ಸರ್ಕಾರ ವೀರಶೈವ ಲಿಂಗಾಯಿತ ಅಭಿವೃದ್ಧಿ ನಿಗಮ ಸ್ಥಾಪನೆಗೆ ಆದೇಶಿಸಿರುವುದನ್ನು ಅಖಿಲ ಭಾರತ ವೀರಶೈವ ಮಹಾಸಭಾ ರಾಷ್ಟ್ರೀಯ ಅಧ್ಯಕ್ಷ, ಶಾಸಕ ಡಾ.ಶಾಮನೂರು ಶಿವಶಂಕರಪ್ಪ ಸ್ವಾಗತಿಸಿದ್ದಾರೆ.
ರಾಜ್ಯದಲ್ಲಿ ವೀರಶೈವ-ಲಿಂಗಾಯತ ಸಮಾಜದವರು ಹೆಚ್ಚಿನ ಸಂಖ್ಯೆಯಲ್ಲಿದ್ದು, ಇದರಲ್ಲಿ ಆರ್ಥಿಕ, ಸಾಮಾಜಿಕ ಮತ್ತು ಶೈಕ್ಷಣಿಕವಾಗಿ ಹಿಂದುಳಿದವರೂ ಇದ್ದಾರೆ. ಈ ಹಿನ್ನೆಲೆಯಲ್ಲಿ ಅಭಿವೃದ್ಧಿ ನಿಗಮ ಸ್ಥಾಪನೆ ಹಾಗೂ 2ಎ ವರ್ಗಕ್ಕೆ ಸಮಾಜವನ್ನು ಸೇರ್ಪಡೆ ಮಾಡಬೇಕೆಂಬ ಬೇಡಿಕೆಯನ್ನು ಸರ್ಕಾರದ ಮುಂದಿಡಲಾಗಿತ್ತು. ರಾಜ್ಯ ಸರ್ಕಾರ ನಿಗಮ ಸ್ಥಾಪನೆಗೆ ಮುಂದಾಗಿದ್ದು, ಶೀಘ್ರವೇ 2ಎ ವರ್ಗಕ್ಕೆ ವೀರಶೈವ-ಲಿಂಗಾಯತ ಸಮಾಜವನ್ನು ಸೇರ್ಪಡೆಗೊಳಿಸಿ ಆದೇಶ ಹೊರಡಿಸಬೇಕು. ನಿಗಮಕ್ಕೆ ಜನಸಂಖ್ಯೆ ಆಧರಿಸಿ ಅನುದಾನ ನೀಡಬೇಕೆಂದು ಅವರು ಒತ್ತಾಯಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss