ನಿಝಾಮುದ್ದೀನ್‌ ಧಾರ್ಮಿಕ ಕಾರ್ಯಕ್ರಮಕ್ಕೆ ದಕ್ಷಿಣ ಕನ್ನಡ ಜಿಲ್ಲೆಯಿಂದ 21 ಮಂದಿ ಭಾಗಿ !!

0
352

ಮಂಗಳೂರು: ಹೊಸದಿಲ್ಲಿ ನಿಝಾಮುದ್ದೀನ್‌ನಲ್ಲಿ ನಡೆದ ತಬ್ಲಿಗ್ ಧಾರ್ಮಿಕ ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಿಂದ 21 ಮಂದಿ ಭಾಗವಹಿಸಿದ್ದಾರೆ.
ಇವರೆಲ್ಲರನ್ನೂ ಸಂಪರ್ಕಿಸಿ ಅವರನ್ನು ಆಸ್ಪತ್ರೆ ನಿಗಾವಣೆಯ ಕೇಂದ್ರದಲ್ಲಿ ಇಡಲಾಗಿದೆ. ಅವರಿಗೆ ಅಗತ್ಯ ವೈದ್ಯಕೀಯ ಪರೀಕ್ಷೆಗಳನ್ನು ನಡೆಸಲಾಗುತ್ತಿದ್ದು, ಗಂಟಲು ದ್ರವ ಪರೀಕ್ಷೆಗಳನ್ನು ನಡೆಸಲು ನಿರ್ಧರಿಸಲಾಗಿದೆ. ಪ್ರಕರಣಗಳ ಪರಿಶೀಲನೆ ಮುಂದುವರಿದಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧು ಬಿ.ರೂಪೇಶ್ ತಿಳಿಸಿದ್ದಾರೆ.
ತಬ್ಲಿಗ್ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಿದವರ ಮನೆಯವರ ಮೇಲೂ ಜಿಲ್ಲಾಡಳಿತ ತೀವ್ರ ನಿಗಾ ಇರಿಸಿದೆ. ಅವರನ್ನು ಹೋಂ ಕ್ವಾರಂಟೈನ್‌ನಲ್ಲಿ ಇರಿಸುವಂತೆ ಸೂಚಿಸಿದೆ.

LEAVE A REPLY

Please enter your comment!
Please enter your name here