Wednesday, August 10, 2022

Latest Posts

ನಿನ್ನೆ ದೇಶದಲ್ಲಿ ಕೊರೋನಾ ಸೋಂಕಿತರಿಗಿಂತ ಗುಣಮುಖರಾದವರ ಸಂಖ್ಯೆಯೇ ಹೆಚ್ಚು!

ಹೊಸದಿಗಂತ ಆನ್ ಲೈನ್ ಡೆಸ್ಕ್:

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 15,158 ಹೊಸ ಕೊರೋನಾ ಪ್ರಕರಣಗಳು ಪತ್ತೆಯಾಗಿದ್ದು, 175 ಮಂದಿ ಮೃತಪಟ್ಟಿದ್ದಾರೆ.

ಒಟ್ಟು ಕೊರೋನಾ ಸೋಂಕಿತರ ಸಂಖ್ಯೆ 1,05,42,841ಕ್ಕೆ ಏರಿಕೆಯಾಗಿದ್ದು, ಇದರಲ್ಲಿ 2,11,033 ಸೋಂಕಿತರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ನಿನ್ನೇ ದೇಶದಲ್ಲಿ 16,977 ಮಂದಿ ಗುಣಮುಖರಾಗಿದ್ದು, ಒಟ್ಟಾರೆ ಗುಣಮುಖರಾದವರ ಸಂಖ್ಯೆ 1,01,79,715ಕ್ಕೆ ಏರಿಕೆಯಾಗಿದೆ. ನಿನ್ನೆ ದೇಶದಲ್ಲಿ 175 ಮಂದಿ ಕೊರೋನಾ ಸೋಂಕಗೆ ಬಲಿಯಾಗಿದ್ದು, ಈವರೆಗೂ ಒಟ್ಟು 1,52,093 ಮಂದಿ ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಇಲಾಖೆ ವರದಿ ತಿಳಿಸಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss