Thursday, July 7, 2022

Latest Posts

ನಿಮ್ಮ ಉದ್ದೇಶ, ಮನೋಭಾವ, ದೃಢ ನಿಶ್ಚಯವೇ ಯಶಸ್ಸಿಗೆ ಕಾರಣ: ಟೀಂ ಇಂಡಿಯಾಕ್ಕೆ ಮೋದಿ ಅಭಿನಂದನೆ

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ಬ್ರಿಸ್ಬೇನ್​ನ ಗಬ್ಬಾದಲ್ಲಿ ಆಸ್ಟ್ರೇಲಿಯಾ ತಂಡಕ್ಕೆ ಸೋಲಿನ ರುಚಿ ಉಣಿಸಿದ ಟೀಂ ಇಂಡಿಯಾಕ್ಕೆ ಪ್ರಧಾನಿ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ.
“ಆಸ್ಟ್ರೇಲಿಯಾದಲ್ಲಿ ನಡೆದ ಸರಣಿಯಲ್ಲಿ ಭಾರತೀಯ ಕ್ರಿಕೆಟ್ ತಂಡದ ಯಶಸ್ಸನ್ನು ನಾವೆಲ್ಲರೂ ಆನಂದಿಸಿದ್ದೇವೆ. ಅವರ ಗಮನಾರ್ಹ ಸಾಮರ್ಥ್ಯ ಮತ್ತು ಉತ್ಸಾಹ ಸರಣಿಯುದ್ದಕ್ಕೂ ಗೋಚರಿಸಿದೆ. ಅವರ ಉದ್ದೇಶ, ಮನೋಭಾವ ಮತ್ತು ದೃಢ ನಿಶ್ಚಯವೇ ಈ ಯಶಸ್ಸಿಗೆ ಕಾರಣ. ಭಾರತ ತಂಡಕ್ಕೆ ಅಭಿನಂದನೆಗಳು! ನಿಮ್ಮ ಮುಂದಿನ ಪ್ರಯತ್ನಗಳಿಗೆ ಶುಭವಾಗಲಿ’ ಎಂದು ಮೋದಿ ಟ್ವೀಟ್ ಮೂಲಕ ತಿಳಿಸಿದ್ದಾರೆ.
ಆಸ್ಟ್ರೇಲಿಯಾ ತಂಡ ನೀಡಿದ್ದ 328 ರನ್​ಗಳ ಬೃಹತ್​ ಮೊತ್ತವನ್ನು ಬೆನ್ನತ್ತಿದ ಭಾರತ ತಂಡ ರಿಷಭ್ ಪಂತ್​, ಶುಭಮನ್ ಗಿಲ್​, ಚೇತೇಶ್ವರ್ ಪೂಜಾರ ಅವರ ತಾಳ್ಮೆಯ ಆಟದ ನೆರವಿನಿಂದ ಭಾರತ ತಂಡ 32 ವರ್ಷಗಳಿಂದಲೂ ಸೋಲೇ ಕಾಣದಿದ್ದ ಬ್ರಿಸ್ಬೇನ್​ನಲ್ಲಿ 3 ವಿಕೆಟ್‌ಗಳಿಂದ ಜಯ ಸಾಧಿಸಿ ಬಾರ್ಡರ್ ಗವಾಸ್ಕರ್​ ಟ್ರೋಫಿಯನ್ನು ತನ್ನಲ್ಲೇ ಉಳಿಸಿಕೊಂಡಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss