ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಬಿದ್ದ ಕಾರು: ಸ್ಥಳದಲ್ಲೇ ಮೂವರ ಸಾವು

0
187

ತುಮಕೂರು: ಶಿರಾ ತಾಲೂಕಿನ ಹೊನ್ನೇಹಳ್ಳಿ ಅರಣ್ಯಪ್ರದೇಶದ ವ್ಯಾಪ್ತಿಯಲ್ಲಿ ಪ್ರಪಾತಕ್ಕೆ ಕಾರ್ ಉರುಳಿ ಬಿದ್ದು ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಕಾರ್ ನಲ್ಲಿದ್ದ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ವೇಗವಾಗಿ ಚಲಿಸುತ್ತಿದ್ದ ಕಾರ್ ಎದುರಿನಿಂದ ಬಂದ ವಾಹನಕ್ಕೆ ಡಿಕ್ಕಿ ಆಗುವುದನ್ನು ತಪ್ಪಿಸುವಾಗ ಚಾಲಕನ ನಿಯಂತ್ರಣ ತಪ್ಪಿ ಸುಮಾರು 30 ಅಡಿ ಆಳದ ಪ್ರಪಾತಕ್ಕೆ ಉರುಳಿ ಬಿದ್ದಿದೆ. ಶಿರಾ ತಾಲೂಕಿನ ಬರಗೂರು ಗ್ರಾಮದ ಬಸವರಾಜ್ ಸೇರಿದಂತೆ ಮೂವರು ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಸಚಿನ್ ಮತ್ತು ನವೀನ್ ಎಂಬುವರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ಶಿರಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದ್ದು, ಪೊಲೀಸರು ಮುಂದಿನ ಕ್ರಮಕೈಗೊಂಡಿದ್ದಾರೆ.

LEAVE A REPLY

Please enter your comment!
Please enter your name here