ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Tuesday, June 22, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ನಿಯಮಗಳ ಉಲ್ಲಂಘಿಸಿ ಹೊರಗಡೆ ಬಂದರೆ ಎಫ್‍ಐಆರ್: ಎಸ್ಪಿ ಸೈದುಲು ಅಡಾವತ್ ಎಚ್ಚರಿಕೆ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………….

ಹೊಸ ದಿಗಂತ ವರದಿ, ಬಳ್ಳಾರಿ:

ಕೊರೊನಾ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಬಳ್ಳಾರಿ ಹಾಗೂ ವಿಜಯನಗರ ಉಭಯ ಜಿಲ್ಲೆಗಳಲ್ಲಿ ಸಂಪೂರ್ಣ ಜನಸಂಚಾರಕ್ಕೆ ನಿರ್ಬಂಧ ವಿಧಿಸಿ ಜಿಲ್ಲಾಡಳಿತ ಆದೇಶಿಸಿದ್ದು, ಇದಕ್ಕೆ ಜನರು ಸಹಕರಿಸಬೇಕು, ಅನಗತ್ಯವಾಗಿ ಹೊರಗಡೆ ಜನರು ಕಂಡು ಬಂದಲ್ಲಿ ಅವರ ಮೇಲೆ ಪ್ರಕರಣ ದಾಖಲಾಗಿಸುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೈದುಲು ಅಡಾವತ್ ಅವರು ಎಚ್ಚರಿಸಿದ್ದಾರೆ.
ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲಾಕ್ ಡೌನ್ ಆದಾಗಿನಿಂದ ಬಳ್ಳಾರಿ ಜಿಲ್ಲಾ ಪೊಲೀಸ್ ನಿತ್ಯ 600 ವಾಹನಗಳನ್ನು ಸೀಜ್ ಮಾಡುತ್ತಿದ್ದಾರೆ. ಕಳೆದ 10 ದಿನಗಳಲ್ಲಿ 320 ಜನರ ಮೇಲೆ ಎಫ್‍ಐಆರ್ ದಾಖಲಿಸಲಾಗಿದ್ದು,ಇದರಲ್ಲಿ ಶೇ.70ರಷ್ಟು ಜನರನ್ನು ಜೈಲಿಗೆ ಕಳುಹಿಸಲಾಗಿದೆ ಎಂದರು.
ಜನರು ಅನಗತ್ಯವಾಗಿ ಹೊರಡಗಡೆ ಬರದೇ ಜಿಲ್ಲಾಡಳಿತದೊಂದಿಗೆ ಸಹಕರಿಸುವ ಮೂಲಕ ಕೋವಿಡ್ ಮಹಾಮಾರಿ ನಿಯಂತ್ರಿಸಲು ಕೈಜೋಡಿಸಬೇಕು ಎಂದು ಮನವಿ ಮಾಡಿರುವ ಎಸ್ಪಿ ಸೈದುಲು ಅಡಾವತ್ ಅವರು ನಿಯಮಗಳನ್ನು ಉಲ್ಲಂಘಿಸಿ ಹೊರಬಂದಲ್ಲಿ ಅವರ ಮೇಲೆ ಪ್ರಕರಣ ದಾಖಲಿಸಿ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss