Tuesday, June 28, 2022

Latest Posts

ನಿರಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ನಿಂದ ಸೈಕಲ್ ಸವಾರಿ ಪ್ರತಿಭಟನೆ

ಬೆಂಗಳೂರು: ಕೇಂದ್ರ ಸರ್ಕಾರ ನಿರಂತರ ಪೆಟ್ರೋಲ್‌ ಹಾಗೂ ಡೀಸೆಲ್‌ ಬೆಲೆ ಏರಿಕೆ ಖಂಡಿಸಿ ಜೂ.29 ರಂದು ರಾಜ್ಯ ಕಾಂಗ್ರೆಸ್‌ ವತಿಯಿಂದ ಸೈಕಲ್‌ ಸವಾರಿ ಮಾಡುವ ಮೂಲಕ ಪ್ರತಿಭಟನೆ ಮಾಡಲು ನಿರ್ಧರಿಸಲಾಗಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ನೇತೃತ್ವದಲ್ಲಿ ಶನಿವಾರ ನಡೆದ ಹಿರಿಯ ನಾಯಕರ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಮುಂದಿನ ದಿನಗಳಲ್ಲಿ ತೀವ್ರತರ ಪ್ರತಿಭಟನೆ ಹಮ್ಮಿಕೊಳ್ಳಲು ಸಭೆಯಲ್ಲಿ ತೀರ್ಮಾನಿಸಲಾಯಿತು.
ರಾಜ್ಯ ಸರ್ಕಾರ ಜಾರಿಗೆ ತಂದಿರುವ ಭೂ ಸುಧಾರಣೆ ಕಾಯ್ದೆ, ಕೇಂದ್ರ ಸರ್ಕಾರ ಜಾರಿಗೆ ಮುಂದಾಗಿರುವ ಎಪಿಎಂಸಿ ತಿದ್ದುಪಡಿ ಕಾಯ್ದೆ ಹಾಗೂ ಕಾರ್ಮಿಕ ತಿದ್ದು  ಪಡಿ ಕಾಯ್ದೆಗಳ ವಿರುದ್ಧ ಪ್ರಬಲ ವಿರೋಧ ವ್ಯಕ್ತಪಡಿಸಿ ಈ ಕಾಯ್ದೆಗಳು ಜಾರಿಯಾಗದಂತೆ ನೋಡಿಕೊಳ್ಳಲು ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ತಿಳಿದು ಬಂದಿದೆ. ಪಕ್ಷದ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಪಕ್ಷದ ರಾಷ್ಟ್ರೀಯ ನಾಯಕರ ವಿರುದ್ಧ ಬಿಜೆಪಿಯವರು ಆರೋಪ ಮಾಡಿದಾಗ ರಾಷ್ಟ್ರೀಯ ನಾಯಕರ ಸಮರ್ಥನೆಗೆ ಯಾರೂ ಮುಂದಾಗುವುದಿಲ್ಲ.
ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಯಾರೂ ಮಾತನಾಡುವು  ದಿಲ್ಲ. ಹೊಂದಾಣಿಕೆ ರಾಜಕಾರಣದಿಂದ ಕಾಂಗ್ರೆಸ್‌ಗೆ ಹಿನ್ನಡೆಯಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆಂದು ತಿಳಿದು ಬಂದಿದೆ. ಅವರ ಮಾತಿಗೆ ಧ್ವನಿಗೂಡಿಸಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌, ರಾಜ್ಯದಲ್ಲಿ ಕೇಂದ್ರ-ರಾಜ್ಯ ಸರ್ಕಾರದ ವೈಫಲ್ಯಗಳ ವಿರುದ್ಧ ಉಗ್ರ ಹೋರಾಟ ಮಾಡಲಾಗುವುದು.ಯಾವುದೇ ರೀತಿಯ ಹೊಂದಾಣಿಕೆ ರಾಜಕಾರಣ ಮಾಡುವ ಪ್ರಶ್ನೆಯೇ ಇಲ್ಲ ಎಂದು ಸಭೆಯಲ್ಲಿ ಭರವಸೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss