Friday, July 1, 2022

Latest Posts

ನಿರ್ಭಯಾ ಪ್ರಕರಣದ ಅಂತಿಮ ತೀರ್ಪಿಗೆ ತಡೆ.?

ಹೊಸದಿಲ್ಲಿ:  ನಿರ್ಭಯಾ ಅತ್ಯಾಚಾರ ಪ್ರಕರಣದ ಅಪರಾಧಿ ಮುಖೇಶ್ ಸಲ್ಲಿಸಿದ್ದ ಕ್ಷಮಾದಾನ ಅರ್ಜಿಯನ್ನು ರಾಷ್ಟ್ರಪತಿ  ರಾಮನಾಥ ಕೋವಿಂದ್ ತಿರಸ್ಕರಿಸಿದ್ದಾರೆ.

ಮುಖೇಶ್ ಸಲ್ಲಿಸಿದ ಅರ್ಜಿಯನ್ನು ವಜಾಮಾಡುವಂತೆ ಗುರುವಾರ ದಿಲ್ಲಿ ಸರ್ಕಾರ, ಕೇಂದ್ರ ಗೃಹ ಸಚಿವಾಲಯಕ್ಕೆ  ಅರ್ಜಿಯನ್ನು ರವಾನಿಸಿತ್ತು.

ಇಂದು ರಾಷ್ಟ್ರಪತಿ ರಾಮನಾಥ ಕೋವಿಂದ್ ಕ್ಷಮಾದಾನ ಅರ್ಜಿಯನ್ನು ತಿರಸ್ಕರಿಸಿದ್ದಾರೆ ಎಂದು ಗೃಹ ಸಚಿವಾಲಯದಿಂದ ಅಧಿಕೃತ ಮಾಹಿತಿ ವರದಿಯಾಗಿದೆ.

ಕ್ಷಮಾದಾನ ಅರ್ಜಿಯನ್ನು ಕೇಂದ್ರ ಗೃಹ ಸಚಿವಾಲಯ ತಿರಸ್ಕರಿಸಿದ ನಂತರ ಲೆಫ್ಟಿನೆಂಟ್ ಗವರ್ನರ್ ಗೆ ರವಾನೆ ಮಾಡಲಾಗುತ್ತದೆ. ಈಗ  ಕೇಂದ್ರ ಗೃಹಸಚಿವಾಲಯ ತೀರ್ಮಾನವನ್ನು ಲೆಫ್ಟಿನೆಂಟ್ ಗವರ್ನರ್ ಗೆ ಕಳಿಸಿರುವುದಾಗಿ ತಿಳಿದು ಬಂದಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss