Tuesday, July 5, 2022

Latest Posts

ನಿವಾರ್ ಎಫೆಕ್ಟ್: ಬೆಂಗಳೂರಿನಲ್ಲಿ ದಿನವಿಡೀ ಸುರಿದ ತುಂತುರು ಮಳೆ

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಬಂಗಾಳಕೊಲ್ಲಿಯಲ್ಲಿ ಸೃಷ್ಟಿಯಾಗಿದ್ದ ‘ನಿವಾರ್ ಚಂಡಮಾರುತದ ಪರಿಣಾಮವಾಗಿ ಗುರುವಾರ ದಿನವಿಡೀ ತುಂತುರು ಮಳೆಯಾಗಿದೆ.

ಧಾರಾಕಾರ ಮಳೆ ಸಂಭವಿಸದೆ, ದಟ್ಟವಾದ ಮೋಡ ಕವಿದ ವಾತಾವರಣದೊಂದಿಗೆ ತುಂತುರು ಮಳೆ ಸುರಿದಿದೆ. ನಡುಕ ಹುಟ್ಟಿಸುವಷ್ಟು ಚಳಿಯಿತ್ತು. ಬೆಂಗಳೂರಿನಲ್ಲಿ ಗುರುವಾರ ಸರಾಸರಿ 3 ಸೆಂ.ಮೀಗಿಂತ ಕಡಿಮೆ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ವಿಜಯನಗರ, ರಾಜಾಜಿನಗರ, ಮೆಜೆಸ್ಟಿಕ್, ಕೆ.ಆರ್.ಮಾರುಕಟ್ಟೆ, ಕೆಂಗೇರಿ, ಮೈಸೂರು ರಸ್ತೆ, ಶಾಂತಿನಗರ, ಜಯನಗರ, ಚಾಮರಾಜಪೇಟೆ, ಹೆಬ್ಬಾಳ, ಯಲಹಂಕ, ಬನಶಂಕರಿ, ರಾಜರಾಜೇಶ್ವರಿ ನಗರ ಸೇರಿದಂತೆ ಬಹುತೇಕ ಎಲ್ಲ ಬಡಾವಣೆಗಳಲ್ಲಿ ತುಂತುರು ಮಳೆ ಮಧ್ಯಾಹ್ನದವರೆಗೆ ಸುರಿಯಿತು. ಸಂಜೆ ವೇಳೆಗೆ ಏರತೊಡಗಿದ ಮಳೆ ರಾತ್ರಿವರೆಗೆ ನಿರಂತರವಾಗಿ ಸುರಿಯಿತು. ಇಡೀ ನಗರದಲ್ಲಿಯೂ ಥಂಡಿ ವಾತಾವರಣ ಸೃಷ್ಟಿಯಾಗಿತ್ತು.

ಶುಕ್ರವಾರ ಬೆಳಿಗ್ಗೆ ಬೆಂಗಳೂರಿನ ಜನತೆಗೆ ಸೂರ್ಯನ ದರ್ಶನವಾಗಿದೆ. ನಿನ್ನೆಗೆ ಹೋಲಿಸಿದರೆ ಇಂದು ಮೋಡದ ವಾತಾವರಣ ಕಡಿಮೆ ಪ್ರಮಾಣದಲ್ಲಿದೆ.

 

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss