Sunday, February 28, 2021

Latest Posts

ನಿವಾರ್ ಚಂಡಮಾರುತ ಎಫೆಕ್ಟ್: ತಮಿಳುನಾಡಿನಲ್ಲಿ ಸಾರ್ವತ್ರಿಕ ರಜೆ ಘೋಷಣೆ, ಪುದುಚೇರಿಯಲ್ಲಿ ನಿಷೇಧಾಜ್ಞೆ

ಹೊಸದಿಗಂತ ಆನ್ ಲೈನ್ ಡೆಸ್ಕ್:

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಉಂಟಾಗಿರುವ ನಿವಾರ್ ಚಂಡಮಾರುತದ ಪ್ರಭಾವದಿಂದ ತಮಿಳುನಾಡು, ಪುದುಚೇರಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆವಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಈ ಕುರಿತು ಮುಖ್ಯಮಂತ್ರಿ ಪಳನಿಸ್ವಾಮಿ ಆದೇಶ ನೀಡಿದ್ದು, ಈ ಹಿನ್ನೆಲೆ ತಮಿಳುನಾಡು ಮತ್ತು ಪುದುಚೇರಿಯಲ್ಲಿ ಈಗಾಗಲೇ ಹೈ ಆಲರ್ಟ್​ ಘೋಷಣೆ ಮಾಡಲಾಗಿದ್ದು, ರಾಜ್ಯದ್ಯಾಂತ ರೆಡ್​ ಆಲರ್ಟ್​ ಘೋಷಣೆ ಮಾಡಿದ್ದಾರೆ.
ಇನ್ನು ಮುನ್ನೆಚ್ಚರಿಕಾ ಕ್ರಮವಾಗಿ ತಮಿಳುನಾಡು ಸರ್ಕಾರ ನಾಳೆ ರಾಜ್ಯಾದ್ಯಂತ ಸಾರ್ವತ್ರಿಕ ರಜೆ ಘೋಷಣೆ ಮಾಡಿದೆ. ಹೀಗಾಗಿ ಜನರು ಮನೆಯಿಂದ ಹೊರಗೆ ಬಾರದಂತೆ ಮನವಿ ಮಾಡಿದರು. ಅಲ್ಲದೇ ಬೆಳಿಗ್ಗೆ 10 ಗಂಟೆಯಿಂದ ಸ್ಥಳೀಯ ರೈಲು ಸಂಚಾರ ಕೂಡ ಸ್ಥಗಿತಗೊಳಿಸಲಾಗುತ್ತಿದ್ದು, ಈಗಾಗಲೇ 7 ಜಿಲ್ಲೆಗಳಲ್ಲಿ ಬಸ್ ಸಂಚಾರ ಬಂದ್ ಮಾಡಲಾಗಿದೆ ಎಂದರು.
ಇನ್ನು ಪುದುಚೇರಿಯಲ್ಲಿ ಮುಂದಿನ ಮೂರು ದಿನ ಸೆಕ್ಷನ್​ 144 ನಿಷೇಧಾಜ್ಞೆಯನ್ನು ವಿಧಿಸಲಾಗಿದೆ.
ಇನ್ನು ಪರಿಸ್ಥಿತಿ ನಿರ್ವಹಣೆಗೆ ಐದು ಪ್ರವಾಹ ಪರಿಹಾರ ತಂಡ ಮತ್ತು ಡೈವಿಂಗ್​ ತಂಡವನ್ನು ಭಾರತೀಯ ನೌಕಪಡೆ ಚೆನ್ನೈಗೆ ಕಳುಹಿಸಿದೆ. ರಾಮೇಶ್ವರಂ, ನಾಗಪಟ್ಟಣಂ, ಐಎನ್​ಎಸ್​ ಪರಂಡುನಲ್ಲಿ ಒಂದು ಪ್ರವಾಹ ಪರಿಹಾರ ತಂಡವನ್ನು ನಿಯೋಜಿಸಲಾಗಿದೆ.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Whatsapp Group
Telegram

Latest Posts

Don't Miss

error: Content is protected !!