ಬೆಂಗಳೂರು: ನಿವೃತ್ತ ಐಪಿಎಸ್ ಅಧಿಕಾರಿ ಅಣ್ಣಾಮಲೈ ಅವರು ಬಿಜೆಪಿ ಸೇರಲಿದ್ದು, ಇದು ಸಂತೋಷಕರ ವಿಷಯ ಎಂದು ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ಹೇಳಿದ್ದಾರೆ.
ಅಣ್ಣಾಮಲೈ ಅವರ ಬಿಜೆಪಿ ಸೇರ್ಪಡೆ ಕುರಿತು ಟ್ವೀಟ್ ಮಾಡಿದ್ದು, ಕರ್ನಾಟಕ ಕೇಡರ್ನ ನಿವೃತ್ತಿ ಐಪಿಎಸ್ ಅಧಿಕಾರಿ. ಕೆ. ಅಣ್ಣಾಮಲೈ ಇಂದು ದೆಹಲಿಯಲ್ಲಿ ಬಿಜೆಪಿ ಸೇರಲಿದ್ದಾರೆ. ಬೆಂಗಳೂರು, ಚಿಕ್ಕಮಗಳೂರು ಸೇರಿದಂತೆ ಹಲವೆಡೆ ದಕ್ಷತೆಯಿಂದ ಕಾರ್ಯನಿರ್ವಹಿಸಿ ಸ್ವಯಂ ನಿವೃತ್ತಿ ಪಡೆದು ಬಿಜೆಪಿ ಸೇರುತ್ತಿದ್ದಾರೆ. ಅವರು ಬಿಜೆಪಿ ಸೇರುತ್ತಿರುವುದು ನನಗೆ ಅತೀವ ಸಂತೋಷ ತಂದಿದೆ. ಅವರಿಗೆ ಹೃದಯಪೂರ್ವಕ ಸ್ವಾಗತ ಎಂದು ಟ್ವೀಟ್ ಮಾಡಿ ಶುಭ ಹಾರೈಸಿದ್ದಾರೆ.
ಕರ್ನಾಟಕ ಕೇಡರ್ನ ನಿವೃತ್ತಿ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ ಇಂದು ದೆಹಲಿಯಲ್ಲಿ ಬಿಜೆಪಿ ಸೇರಲಿದ್ದಾರೆ.
ಬೆಂಗಳೂರು, ಚಿಕ್ಕಮಗಳೂರು ಸೇರಿದಂತೆ ಹಲವೆಡೆ ದಕ್ಷತೆಯಿಂದ ಕಾರ್ಯನಿರ್ವಹಿಸಿ ಸ್ವಯಂ ನಿವೃತ್ತಿ ಪಡೆದು ಬಿಜೆಪಿ ಸೇರುತ್ತಿದ್ದಾರೆ. ಅವರು ಬಿಜೆಪಿ ಸೇರುತ್ತಿರುವುದು ನನಗೆ ಅತೀವ ಸಂತೋಷ ತಂದಿದೆ.ಅವರಿಗೆ ಹೃದಯಪೂರ್ವಕ ಸ್ವಾಗತ. pic.twitter.com/iDqL3SEoaf— Dr Sudhakar K (@mla_sudhakar) August 25, 2020