ರಾಮನಗರ: ತಾಲ್ಲೂಕು ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ಹಾಗೂ ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ಪಡೆಯಲು ಮುಂಚೂಣಿ ಮುಖಂಡರು ರೇಸ್ನಲ್ಲಿರುವಂತೆ, ತಾಲ್ಲೂಕಿನ ನೀಲಕಂಠನಹಳ್ಳಿ ಮಾಜಿ ಗ್ರಾಮ ಪಂಚಾಯ್ತಿ ಸದಸ್ಯ ಹಾಗೂ ಕಾಂಗ್ರೆಸ್ ಯುವ ಮುಖಂಡ ಭರತ್ ತಾನೂ ಕೂಡ ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಆಕಾಂಕ್ಷಿ ಎನ್ನುವುದು ಮುಖಾಂತರ ರೇಸ್ಗೆ ಇಳಿದಿದ್ದಾರೆ.
ಸುಮಾರು ೧೦ ವರ್ಷಗಳಿಂದ ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿ ದುಡಿಯುತ್ತಿರುವ ನಾನು ಪಕ್ಷ ಸಂಘಟನೆಯಲ್ಲಿ ಅದರಲ್ಲೂ ದಲಿತ ಸಮುದಾಯದಲ್ಲಿ ಪಕ್ಷ ಸಂಘಟನೆಗೆ ಹೆಚ್ಚು ಒತ್ತು ನೀಡುತ್ತಿದ್ದು ಇತಿಹಾಸವನ್ನು ಹೊಂದಿರುವ ಕಾಂಗ್ರೆಸ್ ಪಕ್ಷದ ಸಿದ್ದಾಂತಗಳಿಗೆ ಬದ್ದನಾಗಿರುವುದಾಗಿ ತಿಳಿಸಿದ್ದಾರೆ.
ಗ್ರಾಮ ಪಂಚಾಯ್ತಿ ಸದಸ್ಯನಾಗಿ ಈಗಾಗಲೇ ಜನರ ಕಷ್ಟ ಕಾರ್ಪಣ್ಯಗಳನ್ನು ಅರಿತನವಾಗಿದ್ದೇನೆ. ಅಲ್ಲದೆ ಪ್ರತಿಯೊಬ್ಬರ ಭಾವನೆಗಳನ್ನು ಬಲ್ಲವನಾಗಿದ್ದು ಕಾಂಗ್ರೆಸ್ ಪಕ್ಷವನ್ನು ಪ್ರತಿಯೊಂದು ಸಮುದಾಯವನ್ನು ವಿಶ್ವಾಸಕ್ಕೆ ತೆಗೆದುಕೊಂಡು ಬಲವರ್ಧನೆಯನ್ನು ಮಾಡಬೇಕೆಂಬ ಹಂಬಲ ಹೊಂದಿರುವುದಾಗಿ ತಮ್ಮ ಇಚ್ಛೆ ವ್ಯಕ್ತಪಡಿಸಿದ್ದಾರೆ.
ಈ ಬಾರಿಯ ತಾಲ್ಲೂಕು ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನವನ್ನು ನೀಡಿದರೆ, ಪಡೆದ ಸ್ಥಾನವನ್ನು ಸಮರ್ಥವಾಗಿ ನಿಭಾಯಿಸುವುದಲ್ಲದೆ ಪ್ರತಿಯೊಬ್ಬ ಹಿರಿಯ, ಕಿರಿಯ ಮುಖಂಡರ ಜೊತೆಗೂಡಿ ಪಕ್ಷ ಸಂಘಟಿಸುತ್ತೇನೆ. ದಲಿತ ಸಮುದಾಯದ ಯುವಕನಾದ ನನಗೆ ಒಂದು ಬಾರಿ ಅವಕಾಶ ನೀಡಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಲೋಕಸಭಾ ಸಂಸದ ಡಿ.ಕೆ.ಸುರೇಶ್ ಹಾಗೂ ಕಾಂಗ್ರೆಸ್ ಮುಖಂಡರಿಗೆ ಮನವಿ ಮಾಡಿದ್ದಾರೆ.