ಹೊಸದಿಗಂತ ವರದಿ, ಚಿಕ್ಕಮಗಳೂರು:
ನೂತನ ಜಿಲ್ಲಾಧಿಕಾರಿಯಾಗಿ ಕೆ.ಎನ್.ರಮೇಶ್ ಸೋಮವಾರ ಅಧಿಕಾರ ಸ್ವೀಕರಿಸಿದರು.
ಹಿಂದಿನ ಜಿಲ್ಲಾಧಿಕಾರಿ ಡಾ. ಎಸ್.ಬಗಾದಿ ಗೌತಮ್ ಅವರ ವರ್ಗಾವಣೆ ಹಿನ್ನೆಲೆಯಲ್ಲಿ ತೆರವಾಗಿದ್ದ ಸ್ಥಾನಕ್ಕೆ ರಾಜ್ಯ ಪ್ರವಾಸೋದ್ಯಮ ಇಲಾಖೆ ನಿರ್ದೇಶಕರಾಗಿದ್ದ ರಮೇಶ್ ಅವರನ್ನು ನೇಮಿಸಿ ರಾಜ್ಯ ಸರ್ಕಾರ ಆದೇಶಿಸಿತ್ತು.
ಇಂದು ಬಳಗ್ಗೆ ಜಿಲ್ಲಾಧಿಕಾರಿಗಳ ಕಚೇರಿಗೆ ಆಗಮಿಸಿದ ಕೆ.ಎನ್.ರಮೇಶ್ ಅವರಿಗೆ ಪ್ರಭಾರಿ ಜಿಲ್ಲಾಧಿಕಾರಿಗಳು, ಜಿ.ಪಂ.ಮುಖ್ಯ ಕಾರ್ಯನಿರ್ವಾಕ ಅಧಿಕಾರಿಗಳೂ ಆದ ಎಸ್.ಪೂವಿತಾ ಅವರು ಅಧಿಕಾರ ಹಸ್ತಾಂತರಿಸಿದರು.
ಈ ವೇಳೆ ಜಿಲ್ಲಾಧಿಕಾರಿ ಕಚೇರಿ ಸಿಬ್ಬಂದಿಗಳು, ಇತರೆರ ಅಧಿಕಾರಿಗಲು ಜಿಲ್ಲಾಧಿಕಾರಿಗಳಿಗೆ ಪುಷ್ಪಗುಚ್ಛ ನೀಡಿ ಸ್ವಾಗತಿಸಿದರು