ಹೊಸದಿಗಂತ ಆನ್ಲೈನ್ ಡೆಸ್ಕ್:
ಭಾರತದಲ್ಲಿ ಜನವರಿಯಿಂದ ದೇಶದ ಜನತೆಗೆ ಲಸಿಕೆ ನೀಡಲು ಪ್ರಾರಂಭಿಸಬಹುದು ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಹೇಳಿದ್ದಾನೆ.
ಕೇಂದ್ರ ಸರ್ಕಾರದ ಮೊದಲ ಆದ್ಯತೆ ಲಸಿಕೆಯ ಸುರಕ್ಷತೆ ಮತ್ತು ಪರಿಣಾಮಕಾರಿತ್ವ ಎಂದಿದ್ದಾರೆ. ಜನವರಿಯಿಂದ ಯಾವುದೇ ಹಂತದಲ್ಲಿ ಅಥವಾ ಯಾವುದೇ ವಾರದಲ್ಲಿ ಲಸಿಕೆ ಶಾಟ್ ನೀಡಬಹುದು ಎಂದಿದ್ದಾರೆ. ಕೋವಿಡ್-19 ಲಸಿಕೆ ಮತ್ತು ಸಂಶೋಧನೆಗೆ ಸಂಬಂಧಿಸಿದಂತೆ ಭಾರತ ಯಾವುದೇ ದೇಶಕ್ಕಿಂತ ಕಡಿಮೆಯಿಲ್ಲ. ದೇಶದ ಲಸಿಕೆ ಅಭಿವೃದ್ಧಿಪಡಿಸುವಲ್ಲಿ ದೇಶದ ವಿಜ್ಞಾನಿಗಳು ಮತ್ತು ಆರೋಗ್ಯ ತಜ್ಞರು ಕೆಲಸ ಮಾಡಿದ್ದಾರೆ. ಮುಂದಿನ ಏಳು ತಿಂಗಳಲ್ಲಿ ಸುಮಾರು ೩೦ ಕೋಟಿ ಜನರಿಗೆ ಚುಚ್ಚುಮದ್ದು ನೀಡುವ ಸಾಮರ್ಥ್ಯವನ್ನು ಭಾರತ ಹೊಂದಿದೆ ಎಂದಿದ್ದಾರೆ.