ಹೊಸ ದಿಗಂತ ವರದಿ,ಕಲಬುರಗಿ:
ವಿಧಾನಸೌಧದಲ್ಲಿ ಮಾನ್ಯ ಸಭಾಪತಿಗಳಾದ ಶ್ರೀ ಪ್ರತಾಪಚಂದ್ರ ಶೆಟ್ಟಿ ಅವರಿಂದ, ಪಕ್ಷದ ಮುಖಂಡರು ಹಾಗೂ ಗಣ್ಯರ ಸಮ್ಮುಖದಲ್ಲಿ, ವಿಧಾನಪರಿಷತ್ ಸದಸ್ಯರಾಗಿ ಶಶೀಲ ಜಿ ನಮೋಶಿ ಅವರು ಪ್ರಮಾಣ ವಚನ ಸ್ವೀಕರಿಸಿದರು.
ಶೈಕ್ಷಣಿಕ ಅಭಿವೃದ್ಧಿ, ಶಿಕ್ಷಕರ ಏಳಿಗೆಗೆ ಶ್ರಮಿಸಲು ಮತ್ತೊಮ್ಮೆ ಅವಕಾಶ ನೀಡಿದ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಿ.ಎಸ್ ಯಡಿಯೂರಪ್ಪಾ ಜಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷರಾದ ಶ್ರೀ ನಳೀನ್ ಕುಮಾರ್ ಕಟೀಲ್, ಪಕ್ಷದ ಎಲ್ಲಾ ಹಿರಿಯ ಮುಖಂಡರು, ಮತದಾರ ಬಾಂಧವರಿಗೆ ಹೃದಯಪೂರ್ವಕ ಧನ್ಯವಾದಗಳು. ನನಗೆ ಕೊಟ್ಟಿರುವ ಈ ಸುಭೀಕ್ಷೆಯನ್ನು ಉತ್ತಮ ರೀತಿಯಲ್ಲಿ ಬಳಸಿಕೊಂಡು, ಪ್ರಣಾಳಿಕೆಯಲ್ಲಿ ಕೊಟ್ಟ ಭರವಸೆಯನ್ನು ಈಡೇರಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆಂದು ಮಾದ್ಯಮದವರೊಂದಿಗೆ ಮಾತನಾಡಿದರು.
ಈ ಸಂದರ್ಭದಲ್ಲಿ ಸಚಿವರಾದ ಶ್ರೀ ಜಗದೀಶ್ ಶೆಟ್ಟರ್, ಶ್ರೀ ಕೋಟ ಶ್ರೀನಿವಾಸ ಪೂಜಾರಿ, ನೂತನ ವಿಧಾನಪರಿಷತ್ ಸದಸ್ಯರು ಹಾಗೂ ಆತ್ಮೀಯರಾದ ಶ್ರೀ ಎಸ್.ವಿ. ಸಂಕನೂರ, ಶ್ರೀ ಪುಟ್ಟಣ್ಣ ಹಾಗೂ ಶ್ರೀ ಚಿದಾನಂದ ಗೌಡ ಹಾಗೂ ಇತರೆ ಪ್ರಮುಖರು ಹಾಜರಿದ್ದರು.