ಹೊಸ ದಿಗಂತ ವರದಿ, ಬಾಗಲಕೋಟೆ:
ಬಹುದಿನಗಳ ಬೇಡಿಕೆಯಾಗಿದ್ದ ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಗಮ ನಿಯಮಿತ ಬಾದಾಮಿಯ ಕಾರ್ಯ ಮತ್ತು ಪಾಲನೆ ಉಪವಿಭಾಗದ ನೂತನ ಕಚೇರಿಯನ್ನು ಮಾಜಿ ಮುಖ್ಯಮಂತ್ರಿಗಳು ಹಾಗೂ ವಿಧಾನ ಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಉದ್ಘಾಟಿಸುವ ಮೂಲಕ ಕಛೇರಿ ಕಾರ್ಯ ಆರಂಭಕ್ಕೆ ಶುಕ್ರವಾರ ಚಾಲನೆ ನೀಡಿದರು.
ಈ ಸಮಾರಂಭದಲ್ಲಿ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಬಾಯಕ್ಕ ಮೇಟಿ, ಪುರಸಭೆ ಅಧ್ಯಕ್ಷ ಮಂಜುನಾಥ ಹೊಸಮನಿ, ಹೆಸ್ಕಾಂ ಕಚೇರಿಯ ಅಧಿಕಾರಿ ಹಾಗೂ ಸಿಬ್ಬಂದಿಗಳು ಉಪಸ್ಥಿತಿತರಿದ್ದರು.