ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Tuesday, June 22, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ನೆರೆ ಪರಿಸ್ಥಿತಿ ನಿಯಂತ್ರಣದಲ್ಲಿದೆ, ಅಧಿಕಾರಿಗಳನ್ನು ಅಲರ್ಟ್ ಮಾಡಲು ರಾಜ್ಯದಲ್ಲಿ ಪ್ರವಾಸ ಮಾಡುತ್ತಿದ್ದೇನೆ: ಸಚಿವ ಆರ್. ಅಶೋಕ್

ಉಡುಪಿ: ಕೊಡಗಿನಲ್ಲಿ ತಲಕಾವೇರಿ ಬಳಿಯ ಅರ್ಚಕರು ಮನೆ ಖಾಲಿ ಮಾಡಿ, ಸ್ಥಳಾಂತರ ಆಗದೇ ಇರುವುದರಿಂದ ಸಮಸ್ಯೆ ಆಗಿದೆ‌. ಕೊಡಗಿಗೂ ನಾನು ಭೇಟಿ ಮಾಡುತ್ತೇನೆ ಎಂದು ರಾಜ್ಯ ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದ್ದಾರೆ.
ಉಡುಪಿ-ಮಂಗಳೂರು ಕಾರವಾರ ಪ್ರವಾಸದಲ್ಲಿರುವ ಕಂದಾಯ ಸಚಿವರು, ಜಿಲ್ಲೆಯ ಮಳೆ ಸಂತ್ರಸ್ತ ಪ್ರದೇಶಗಳಿಗೆ ಭೇಟಿ ನೀಡಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಸಭೆ ನಡೆಸಿದರು.
ಸದ್ಯ ಕೊಡಗು ಹೊರತುಪಡಿಸಿದರೆ ಉಳಿದ ಜಿಲ್ಲೆಗಳಲ್ಲಿ ಸಾಮಾನ್ಯ ಸ್ಥಿತಿ ಇದೆ. ಮಳೆ ಮತ್ತು ನೆರೆಯ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದ ಸಚಿವರು, ಅಧಿಕಾರಿಗಳನ್ನು ಅಲರ್ಟ್ ಮಾಡಲು ರಾಜ್ಯದಲ್ಲಿ ಪ್ರವಾಸ ಮಾಡುತ್ತಿದ್ದೇನೆ ಎಂದರು.
ಕಂದಾಯ, ಪೊಲೀಸ್ ಇಲಾಖೆಯ ಜವಾಬ್ದಾರಿ ತುಂಬಾ ಹೆಚ್ಚಿದೆ. ಯಾವುದೇ ಅಧಿಕಾರಿಗಳು ರಜೆ ತೆಗೆದುಕೊಳ್ಳದೆ ಕೆಲಸ ಮಾಡಬೇಕು. ಕಳೆದ ಬಾರಿ ಆದಂತೆ ಯಾವುದೇ ಅನಾಹುತ ಆಗಬಾರದು ಎಂದು ಸೂಚನೆ ನೀಡಿದರು.
ಒಂದು ತಿಂಗಳಿಂದ ನಡೆದಿದೆ ತಯಾರಿ
ಕಳೆದ ಬಾರಿ ನಮ್ಮ ಸರಕಾರ ಆಗಷ್ಟೇ ಅಧಿಕಾರಕ್ಕೆ ಬಂದಿತ್ತು. ಹಿಂದಿನ ಸರಕಾರ ಯಾವುದೇ ತಯಾರಿ ಮಾಡಿರಲಿಲ್ಲ. ಆದರೆ ಈ ಬಾರಿ ಎಲ್ಲ ರೀತಿಯ ತಯಾರಿ ಮಾಡಿಕೊಂಡಿದ್ದೇವೆ. ಕಳೆದ ಒಂದು ತಿಂಗಳಿಂದ ಸನ್ನದ್ದ ಸ್ಥಿತಿಯಲ್ಲಿದ್ದೇವೆ. ಈಗಾಗಲೇ ಎಲ್ಲ ಜಿಲ್ಲಾಧಿಕಾರಿಗಳ ಜೊತೆ ಸಭೆ ನಡೆಸಿದ್ದೇವೆ. ಜಿಲ್ಲಾಡಳಿತ ಕೇಳಿದಷ್ಟು ಹಣವನ್ನು ನೀಡಿದ್ದೇವೆ. ಕಳೆದ ಬಾರಿಯಂತೆ ಯಾವುದೇ ಅನಾಹುತ ಆಗದಂತೆ ಕ್ರಮ ಕೈಗೊಳ್ಳುತ್ತೇವೆ ಎಂದು ಸಚಿವ ಆರ್. ಅಶೋಕ್ ತಿಳಿಸಿದರು.
ಅಗ್ನಿ ಶಾಮಕ ಇಲಾಖೆಗೆ ₹ 20 ಕೋಟಿ ಬಿಡುಗಡೆ
ಪ್ರಾಕೃತಿಕ ವಿಪತ್ತು ನಿರ್ವಹಣೆಗೆ ಅಗತ್ಯವಿರುವ ಬೋಟು, ಕಟ್ಟಿಂಗ್ ಮಿಷನ್, ಲೈಟ್ ಎಲ್ಲ ವ್ಯವಸ್ಥೆ ಮಾಡಿದ್ದಾರೆ. ಅಗ್ನಿಶಾಮಕ ದಳಕ್ಕೆ ಪ್ರತ್ಯೇಕವಾಗಿ 20 ಕೋಟಿ ರೂ. ಬಿಡುಗಡೆ ಮಾಡಿದೆ. ಪೊಲೀಸ್, ಅಗ್ನಿಶಾಮಕ ದಳ, ಕಂದಾಯ ಇಲಾಖೆ ಜಂಟಿಯಾಗಿ ಕೆಲಸ ಮಾಡುತ್ತೇವೆ ಎಂದು ಸಚಿವರು ವಿಶ್ವಾಸ ವ್ಯಕ್ತಪಡಿಸಿದರು.
ಸಭೆಯಲ್ಲಿ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಶಾಸಕರಾದ ರಘುಪತಿ ಭಟ್, ಸುನೀಲ್ ಕುಮಾರ್, ಹಾಲಾಡಿ ಶ್ರೀನಿವಾಸ ಶೆಟ್ಟಿ, ಜಿ.ಪಂ. ಅಧ್ಯಕ್ಷ ದಿನಕರ ಬಾಬು, ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ, ಜಿ.ಪಂ. ಸಿಇಒ ಪ್ರೀತಿ ಗೆಹ್ಲೋತ್ ಮೊದಲಾದವರಿದ್ದರು‌.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss