ಹೊಸ ದಿಗಂತ ವರದಿ , ಬಳ್ಳಾರಿ:
ಜಿಲ್ಲೆಯ ಸಿರುಗುಪ್ಪ ತಹಸೀಲ್ದಾರ್ ಅವರ ಪತ್ನಿ ಶಂಕ್ರಮ್ಮ (45) ಗುರುವಾರ ತಮ್ಮ ನಿವಾಸದಲ್ಲಿ ನೇಣಿಗೆ ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ತಹಸಿಲ್ದಾರ್ ಸತೀಶ್ ಬಿ. ಕೂಡಲಗಿ ಅವರು ಮನೆಯಲ್ಲಿ ಇರಲಿಲ್ಲ. ನಾಲ್ಕು ಮಕ್ಕಳು ವೇಳೆ ವಿದ್ಯಾಭ್ಯಾಸಕ್ಕೆ ಬೇರೆ ಕಡೆ ವಾಸವಾಗಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತನಿಖೆಯಿಂದ ಹೊರ ಬರಬೇಕಿದೆ.
ಆದರೇ, ತಹಸೀಲ್ದಾರ್ ಪತ್ನಿ ಶಂಕ್ರಮ್ಮ ಅವರು ಮಾನಸಿಕ ಅಸ್ವಸ್ಥರಾಗಿದ್ದರು ಎಂದು ತಿಳಿದು ಬಂದಿದೆ. ಈ ಹಿನ್ನೆಲೆಯಲ್ಲಿ ಶಂಕ್ರಮ್ಮ ಅವರಿಗೆ ಪತಿ ಸತೀಶ್ ಅವರು ಚಿಕಿತ್ಸೆ ಕೊಡಿಸುತ್ತಿದ್ದರು. ಚಿಕಿತ್ಸೆ ಕಳೆದ 15 ವರ್ಷಗಳಿಂದ ನಡೆದಿತ್ತು ಎಂದು ಅವರ ಕುಟುಂಬದ ಸದಸ್ಯರು ತಿಳಿಸಿದ್ದಾರೆ. ಕಳೆದ 15 ವರ್ಷಗಳಿಂದ ಸುಧಾರಣೆ ಕಂಡು ಬಂದಿರಲಿಲ್ಲ. ಸಣ್ಣ ಪುಟ್ಟ ವಿಷಯಕ್ಕೂ ಮನಸ್ಥಾಪ ಮಾಡಿಕೊಳ್ಳುತ್ತಿದ್ದರು. ಮನೆಯಲ್ಲಿ ಯಾರು ಇಲ್ಲದಿರುವಾಗ ಪ್ಯಾನ್ ಗೆ ನೇಣುಬಿಗಿದು ಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಪತಿ ಸತೀಶ್ ಕೂಡಲಗಿ ಅವರು
ರಾಯಚೂರು ಜಿಲ್ಲೆಯ ಲಿಂಗಸೂಗೂರಿಗೆ ತೆರಳಿದ್ದರು. ಅವರು ಬಂದ ಬಳಿಕ ಶವ ತೆಗೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಪ್ರಕರಣ ಸಿರುಗುಪ್ಪ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.