ಮೈಸೂರು: ನೈಋತ್ಯ ರೈಲ್ವೆ ಮೈಸೂರು ವಿಭಾಗದ ನೂತನ ರೈಲ್ವೆ ವ್ಯವಸ್ಥಾಪಕರಾಗಿ ರಾಹುಲ್ ಅಗರ್ವಾಲ್ ಅವರನ್ನ ನೇಮಕ ಮಾಡಲಾಗಿದ್ದು, ಅವರು ಮಂಗಳವಾರ ಅಧಿಕಾರ ಸ್ವೀಕರಿಸಿದರು. ನಿರ್ಗಮಿತ ವ್ಯವಸ್ಥಾಪಕಿ ಅಪರ್ಣಗರ್ಗ್ ಅವರನ್ನ ಬೆಂಗಳೂರಿನ ಯಲಹಂಕ ರೈಲ್ವೆ ಗಾಲಿ ಕಾರ್ಖಾನೆಯಲ್ಲಿ ಪ್ರಧಾನ ಹಣಕಾಸು ಸಲಹೆಗಾರರಾಗಿ ನೇಮಕ ಮಾಡಲಾಗಿದೆ.
ರಾಹುಲ್ ಅಗರ್ವಾಲ್ ನವದೆಹಲಿಯ ರೈಲ್ವೆ ಮಂಡಳಿಯಲ್ಲಿ ಸಂಚಾರ ಸಾರಿಗೆ (ಉಕ್ಕು) ಕಾರ್ಯನಿರ್ವಾಹಕ ನಿರ್ದೇಶಕರಾಗಿ ಹಾಗೂ ಮುಖ್ಯ ವಾಣಿಜ್ಯ ವ್ಯವಸ್ಥಾಪಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ತಮ್ಮ ಅತ್ಯುತ್ತಮ ಸೇವೆಗಾಗಿ ೨೦೧೩ ರಲ್ಲಿ ರೈಲ್ವೆ ಸಚಿವರ ಪ್ರಶಸ್ತಿಗೆ ಭಾಜನರಾಗಿದ್ದರು.