ನೈಟ್ ಕರ್ಪ್ಯೂ: ರೈಲ್ವೆ ಪ್ರಯಾಣಿಕರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ

0
68

ಬೆಂಗಳೂರು : ಕೊರೊನಾ ವೈರಸ್ ಭೀತಿ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ನೈಟ್ ಕರ್ಪ್ಯೂ ಜಾರಿ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ನೈರುತ್ಯ ರೈಲ್ವೆ ಇಲಾಖೆಯ ಟಿಕೆಟ್ ಕಾಯ್ದಿರಿಸುವ ಕೇಂದ್ರಗಳ ಸಮಯದ ಬದಲಾವಣೆ ಮಾಡಲಾಗಿದ್ದು, ಬೆಳಗ್ಗೆ 8 ರಿಂದ ಸಂಜೆ 6 ಗಂಟೆಯವರೆಗೆ ಕಾರ್ಯ ನಿರ್ವಹಿಸುತ್ತದೆ.

ಬೆಂಗಳೂರಿನಲ್ಲಿ ರಾತ್ರಿ ನಿಷೇಧಾಜ್ಞೆ ಜಾರಿಯಲ್ಲಿರುವುದರಿಂದ ಕೆಎಸ್ ಆರ್ ಬೆಂಗಳೂರು ಮತ್ತು ಯಶವಂತಪುರಗಳಲ್ಲಿ ಇರುವ ಪಾರ್ಸೆಲ್ ಕಾರ್ಯಗಳು ಬೆಳಗ್ಗೆ 8 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಮಾತ್ರ ಕಾರ್ಯನಿರ್ವಹಿಸಲಿವೆ.

ಇನ್ನು ಬೆಂಗಳೂರಿನಲ್ಲಿ ಟಿಕೆಟ್ ಕಾಯ್ದಿರಿಸುವ ಕೇಂದ್ರವು ಭಾನುವಾರ ಬೆಳಗ್ಗೆ 8ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಮಾತ್ರ ತೆರೆದಿರುತ್ತವೆ. ಭಾನುವಾರ ಕೆಎಸ್‌ಆರ್ ಬೆಂಗಳೂರು ಹೊರತುಪಡಿಸಿ ಇತರ ಕಡೆ ಕಾಯ್ದಿರಿಸುವ ಕೇಂದ್ರಗಳಿಗೆ ರಜೆ ಇರಲಿದೆ.

LEAVE A REPLY

Please enter your comment!
Please enter your name here