Friday, July 1, 2022

Latest Posts

ನೌಗಾಮ್ ಪ್ರದೇಶದಲ್ಲಿ ಉಗ್ರರಿಂದ ಗುಂಡಿನ ದಾಳಿ: ಇಬ್ಬರು ಪೊಲೀಸರು ಹುತಾತ್ಮ

ಶ್ರೀನಗರ: ಇಂದು ಬೆಳಗ್ಗೆ ಜಮ್ಮು ಕಾಶ್ಮೀರದ ನೌಗಾಮ್ ಬೈಪಾಸ್ ನಲ್ಲಿ ಉಗ್ರರು ದಾಳಿ ನಡೆಸಿದ್ದು, ಮೂವರು ಪೊಲೀಸರು ಗಾಯಗೊಂಡಿದ್ದಾರೆ ಎಂದು ಕಾಶ್ಮೀರ ಪ್ರದೇಶ ಪೊಲೀಸರು ತಿಳಿಸಿದರು.

ನೌಗಮ್ ಬೈಪಾಸ್ ಬಳಿ ಪೊಲೀಸರ ಮೇಲೆ ಭಯೋತ್ಪಾದಕರು ನಿರ್ದಾಕ್ಷಿಣ್ಯವಾಗಿ ಗುಂಡು ಹಾರಿಸಿದ್ದು, 3 ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ. ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಅವರಲ್ಲಿ ಇಬ್ಬರು ಪೊಲೀಸರು ಹುತಾತ್ಮರಾಗಿದ್ದಾರೆ.

ಈಗಾಗಲೇ ಪ್ರದೇಶವನ್ನು ಸುತ್ತುವರಿಯಲಾಗಿದ್ದು, ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ ಎಂದು ಮಾಹಿತಿ ನೀಡಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss