ಪಾಂಡವಪುರ: ಇಲ್ಲಿನ ಕಿರಿಯ ಅಪರ ಸಿವಿಲ್ ನ್ಯಾಯಾಧೀಶೆ ಯಶಸ್ವಿನಿ ಬಿ.ಅಮೀನ್ ಅವರ ನಿವಾಸದಲ್ಲಿ ಕಳ್ಳರು ಕಳ್ಳತನಕ್ಕೆ ಯತ್ನಿಸಿರುವ ಘಟನೆ ತಡ ರಾತ್ರಿಯಲ್ಲಿ ನಡೆದಿದೆ.
ಪಟ್ಟಣದ ಕೃಷ್ಣನಗರದ ಒಂದನೇ ಹಂತದಲ್ಲಿ ಬಾಡಿಗೆ ಮನೆಯಲ್ಲಿ ನ್ಯಾಯಾಧೀಶರು ವಾಸವಿದ್ದು, ನ್ಯಾಯಾಲಯಕ್ಕೆ ರಜೆ ಇದ್ದ ಕಾರಣ ಸ್ವಗ್ರಾಮಕ್ಕೆ ತೆರಳಿದ್ದರು.
ಈ ವೇಳೆ ಹೊಂಚು ಹಾಕಿದ ಕಳ್ಳರು ತಡ ರಾತ್ರಿ ಬಾಗಿಲ ಬೀಗ ಮುರಿದು ಒಳ ನುಗ್ಗಿ ಕಳ್ಳತನಕ್ಕೆ ಯತ್ನಿಸಿದ್ದಾರೆ. ಆದರೆ, ಕಳ್ಳರಿಗೆ ಏನೂ ಸಿಕ್ಕಿಲ್ಲ ಎನ್ನಲಾಗಿದೆ.
ವಿಷಯ ತಿಳಿದ ಪೊಲೀಸರು ಸ್ಥಳಕ್ಕೆ ಶ್ವಾನದಳ, ಬೆರಳಚ್ಚು ತಜ್ಞರ ತಂಡದೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.