ಹೊಸದಿಗಂತ ಆನ್ ಲೈನ್ ಡೆಸ್ಕ್:
ಜಿಲ್ಲಾ ನ್ಯಾಯಾಧೀಶರೊಬ್ಬರ ಮೇಲೆ ಚಪ್ಪಲಿ ಎಸೆದು, ಅವಾಚ್ಯ ಪದಗಳಿಂದ ನಿಂದಿಸಿದ ಆರೋಪದ ಮೇರೆಗೆ 35 ವರ್ಷದ ವಿಚಾರಣಾಧೀನ ಕೈದಿಯೊಬ್ಬರಿಗೆ ಎರಡು ವರ್ಷಗಳ ಕಠಿಣ ಸಜೆ ವಿಧಿಸಲಾಗಿದೆ.
ಐಪಿಸಿ ಸೆಕ್ಷನ್ 353 (ಸರ್ಕಾರಿ ಅಧಿಕಾರಿಯನ್ನು ಕರ್ತವ್ಯ ನಿರ್ವಹಣೆಯಿಂದ ತಡೆಯಲು ಹಲ್ಲೆ) ಮತ್ತು 294 (ಅಶ್ಲೀಲ ಪದಗಳ ಬಳಕೆ) ಅಡಿಯಲ್ಲಿ ವಿಚಾರಣಾಧೀನ ಕೈದಿ ಗಣೇಶ್ ಲಕ್ಷ್ಮಣ್ಗೆ ಎರಡು ವರ್ಷಗಳ ಕಠಿಣ ಶಿಕ್ಷೆಯನ್ನು ವಿಧಿಸಿ ಜಿಲ್ಲಾ ನ್ಯಾಯಾಧೀಶ ಪಿ.ಎಂ. ಗುಪ್ತಾ ಅವರು ಮಾರ್ಚ್ 5ರಂದು ಆದೇಶಿಸಿದ್ದಾರೆ.