ಹೊಸದಿಗಂತ ಡಿಜಿಟಲ್ ಡೆಸ್ಕ್:
ನ್ಯೂಜಿಲೆಂಡ್ ವಿರುದ್ಧದ ಮೂರು ಪಂದ್ಯಗಳ ಟೆಸ್ಟ್ ಸರಣಿಗೆ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ ಟೀಂ ಇಂಡಿಯಾವನ್ನು ಪ್ರಕಟಿಸಿದೆ. ಉಭಯ ತಂಡಗಳ ನಡುವಿನ 3 ಪಂದ್ಯಗಳ ಟೆಸ್ಟ್ ಸರಣಿಯು ಅಕ್ಟೋಬರ್ 16 ರಿಂದ ಪ್ರಾರಂಭವಾಗಲಿದ್ದು, ಈ ಸರಣಿಗಾಗಿ 15 ಸದಸ್ಯರ ಭಾರತ ತಂಡ ಪ್ರಕಟವಾಗಿದೆ.
ಇನ್ನು ಟೀಂ ಇಂಡಿಯಾಕ್ಕೂ ಮುನ್ನವೇ ನ್ಯೂಜಿಲೆಂಡ್ ಕೂಡ ತನ್ನ ತಂಡವನ್ನು ಪ್ರಕಟಿಸಿತ್ತು. ಅದರಂತೆ 17 ಸದಸ್ಯರ ಕಿವೀಸ್ ತಂಡ ಭಾರತಕ್ಕೆ ಬರುತ್ತಿದೆ.
ಟೆಸ್ಟ್ ಸರಣಿಯ ಸಂಪೂರ್ಣ ವೇಳಾಪಟ್ಟಿ
ಮೊದಲ ಟೆಸ್ಟ್ ಪಂದ್ಯ: ಅಕ್ಟೋಬರ್ 16, ಬೆಂಗಳೂರು
ಎರಡನೇ ಟೆಸ್ಟ್ ಪಂದ್ಯ: ಅಕ್ಟೋಬರ್ 24, ಪುಣೆ
ಮೂರನೇ ಟೆಸ್ಟ್ ಪಂದ್ಯ: 1 ನವೆಂಬರ್, ಮುಂಬೈ
ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೊದಲ ಪಂದ್ಯ ಅಕ್ಟೋಬರ್ 16 ರಂದು ಬೆಂಗಳೂರಿನಲ್ಲಿ ನಡೆಯಲ್ಲಿದ್ದು, ಆ ಬಳಿಕ ಎರಡನೇ ಪಂದ್ಯ ಅಕ್ಟೋಬರ್ 24 ರಂದು ಪುಣೆಯಲ್ಲಿ ನಡೆಯಲಿದೆ. ಮೂರನೇ ಹಾಗೂ ಕೊನೆಯ ಟೆಸ್ಟ್ ಪಂದ್ಯ ನವೆಂಬರ್ 1 ರಂದು ಮುಂಬೈನ ಐತಿಹಾಸಿಕ ಮೈದಾನದಲ್ಲಿ ನಡೆಯಲಿದೆ.
ಉಭಯ ತಂಡಗಳು
ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಯಶಸ್ವಿ ಜೈಸ್ವಾಲ್, ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್, ಸರ್ಫರಾಜ್ ಖಾನ್, ರಿಷಭ್ ಪಂತ್ (ವಿಕೆಟ್ ಕೀಪರ್), ಧ್ರುವ ಜುರೆಲ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಜಸ್ಪ್ರೀತ್ ಬುಮ್ರಾ ಮತ್ತು ಮೊಹಮ್ಮದ್ ಸಿರಾಜ್
ಮೀಸಲು ಆಟಗಾರರು: ಮಯಾಂಕ್ ಯಾದವ್, ನಿತೀಶ್ ಕುಮಾರ್ ರೆಡ್ಡಿ, ಹರ್ಷಿತ್ ರಾಣಾ ಮತ್ತು ಪ್ರಸಿದ್ಧ್ ಕೃಷ್ಣ
ನ್ಯೂಜಿಲೆಂಡ್ ಟೆಸ್ಟ್ ತಂಡ: ಟಾಮ್ ಲೇಥಮ್ (ನಾಯಕ), ಟಾಮ್ ಬ್ಲಂಡೆಲ್ (ವಿಕೆಟ್ ಕೀಪರ್), ಮೈಕೆಲ್ ಬ್ರೇಸ್‌ವೆಲ್ (ಮೊದಲನೇ ಟೆಸ್ಟ್ಗೆ ಮಾತ್ರ), ಮಾರ್ಕ್ ಚಾಪ್ಮನ್, ಡೆವೊನ್ ಕಾನ್ವೇ, ಮ್ಯಾಟ್ ಹೆನ್ರಿ, ಡೇರಿಲ್ ಮಿಚೆಲ್, ವಿಲ್ ಓ’ರೂರ್ಕ್, ಅಜಾಜ್ ಪಟೇಲ್, ಗ್ಲೆನ್ ಫಿಲಿಪ್ಸ್, ರಚಿನ್ ರವೀಂದ್ರ, ಮಿಚೆಲ್ ಸ್ಯಾಂಟ್ನರ್, ಬೆನ್ ಸಿಯರ್ಸ್ , ಇಶ್ ಸೋಧಿ (ಎರಡನೇ ಮತ್ತು ಮೂರನೇ ಟೆಸ್ಟ್‌ಗಳಿಗೆ ಮಾತ್ರ), ಟಿಮ್ ಸೌಥಿ, ಕೇನ್ ವಿಲಿಯಮ್ಸನ್, ವಿಲ್ ಯಂಗ್.