ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Monday, June 21, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ನ.1ಕ್ಕೆ ದಸರಾದ ಖರ್ಚು-ವೆಚ್ಚ ಲೆಕ್ಕ ಕೊಡುತ್ತೇವೆ: ಸಚಿವ ಎಸ್.ಟಿ.ಸೋಮಶೇಖರ್

ಮೈಸೂರು: ಈ ಬಾರಿ ನಡೆದ ಮೈಸೂರು ದಸರಾ ಮಹೋತ್ಸವ ಐತಿಹಾಸಿಕವಾಗಿ ನೆನಪು ಉಳಿಯುವಂತಹ ಕಾರ್ಯಕ್ರಮ. ಸರಳವಾಗಿ, ಸಾಂಪ್ರದಾಯಿಕವಾಗಿ, ವರ್ಚುವಲ್ ಆಗಿ ಈ ಬಾರಿ ದಸರಾ ಆಚರಿಸಲಾಗಿದೆ ಎಂದು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದರು.
ಮಂಗಳವಾರ ನಗರದ ಸರ್ಕಾರಿ ಅತಿಥಿ ಗೃಹದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,
ನಾಡಹಬ್ಬ ಮೈಸೂರು ದಸರಾ ಮಹೋತ್ಸವವನ್ನು ಕೊರೋನಾ ಸೋಂಕು ಹರಡುವುದನ್ನು ತಡೆಯುವ ಉದ್ದೇಶದಿಂದ ಸೀಮಿತ ಸಂಖ್ಯೆಯ ಜನರಿಗೆ ಮಾತ್ರ ಅವಕಾಶ ನೀಡಿ ಆಚರಿಸುವಂತೆ, ತಾಂತ್ರಿಕ ಸಲಹಾ ಸಮಿತಿ ನೀಡಿದ್ದ ಮಾರ್ಗಸೂಚಿಯಂತೆ ಸೀಮಿತ ಸಂಖ್ಯೆಯಲ್ಲಿ ಸೇರಿ ಆಚರಿಸಲಾಯಿತು. ಸರಳವಾಗಿ ದಸರಾ ಆಚರಿಸಿದ್ದರೂ ಸಹ, ಅರ್ಥಪೂರ್ಣವಾಗಿ ದಸರಾ ಆಚರಿಸಿದ್ದೇವೆ. ಕೊರೋನಾ ವಿರುದ್ಧ ಹೋರಾಡುತ್ತಿರುವ ಕೊರೊನಾ ಯೋಧರಿಗೆ ಗೌರವ ಸಲ್ಲಿಸುವ ಕೆಲಸ ಕೂಡ ಈ ಬಾರಿ ಮಾಡಲಾಯಿತು ಎಂದು ಹೇಳಿದರು. ಈ ಸಾಲಿನ ದಸರಾವನ್ನು “ಸರಳ, ಸಾಂಪ್ರದಾಯಿಕ ಹಾಗೂ ವರ್ಚುವಲ್” ದಸರಾ ಎಂದು ಕರೆಯಲಾಗಿದೆ. ಅದರಂತೆ ಎಲ್ಲಾ ಕಾರ್ಯಕ್ರಮಗಳನ್ನು ಸಾರ್ವಜನಿಕರು ವೀಕ್ಷಿಸಲು ಅನುಕೂಲವಾಗುವಂತೆ ವರ್ಚುವಲ್ ಆಗಿ ಪ್ರಸಾರ ಮಾಡಲಾಯಿತು. ಲಕ್ಷಾಂತರ ಜನರು ದೂರದರ್ಶನದಲ್ಲಿ, ಫೇಸ್‌ಬುಕ್‌ನಲ್ಲಿ, ಯೂಟ್ಯೂಬ್ ನಲ್ಲಿ, ಹಲವಾರು ಮಾಧ್ಯಮಗಳಲ್ಲಿ, ಮಾಧ್ಯಮಗಳ ಸೋಷಿಯಲ್ ಮೀಡಿಯಾದಲ್ಲಿ ದಸರಾ ವೀಕ್ಷಣೆ ಮಾಡಿದ್ದಾರೆ ಎಂದು ತಿಳಿಸಿದರು.
ವಾರ್ತ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಫೆಸ್‌ಬುಕ್ ಒಂದರಲ್ಲೇ ಜಂಬುಸವಾರಿ ಕಾರ್ಯಕ್ರಮವನ್ನು ಲಕ್ಷಾಂತರ ಜನ ನೋಡಿದ್ದಾರೆ. ಒಟ್ಟು ವಾರ್ತ ಇಲಾಖೆಯ ಫೇಸ್‌ಬುಕ್ ಪೇಜ್‌ನಲ್ಲಿ ಎಲ್ಲಾ ಕಾರ್ಯಕ್ರಮಗಳು ಸೇರಿ ಸುಮಾರು 6 ಲಕ್ಷ ವೀವ್ಸ್ ಆಗಿದೆ. ಇದಲ್ಲದೆ ಹಲವಾರು ಮಾಧ್ಯಮಗಳಿಗೆ ಡೈರೆಕ್ಟ್ ಲಿಂಕ್ ಕೊಡಲಾಗಿತ್ತು. ಅಲ್ಲಿಯೂ ಕೂಡ ಲಕ್ಷಾಂತರ ಜನರ ನೋಡಿ, ಸಂಭ್ರಮಿಸಿದ್ದಾರೆ.
ದಸರಾ ಆಯೋಜಿಸಲು ಸರ್ಕಾರದಿಂದ 10 ಕೋಟಿ ರೂ. ಅನುದಾನ ಮತ್ತು ಮುಡಾದಿಂದ 5 ಕೋಟಿ ರೂ. ಅನುದಾನ ಒದಗಿಸುವುದು ಎಂದು ನಿರ್ಧಾರವಾಗಿತ್ತು. ಆದರೆ ದಸರಾವನ್ನು ಸರ್ಕಾರ ನೀಡಿದ 10 ಕೋಟಿ ರೂ. ಅನುದಾನದಲ್ಲೇ ಪೂರ್ಣಗೊಳಿಸಲಾಗಿದ್ದು, ಮುಡಾ ಘೋಷಿಸಿದ್ದ ೫ ಕೋಟಿ ರೂ. ಅನುದಾನವನ್ನು ಪಡೆದಿರುವುದಿಲ್ಲ. ಸರ್ಕಾರದ ಅನುದಾನದಲ್ಲೂ ಯಾವುದಕ್ಕೆ ಎಷ್ಟು ಖರ್ಚಾಗಿದೆ ಎಂಬುದನ್ನು ನವೆಂಬರ್ 1 ರಂದು ತಿಳಿಸಲಾಗುವುದು.
ಸುದ್ದಿಗೋಷ್ಠಿಯಲ್ಲಿ ಶಾಸಕರಾದ ಎಸ್.ಎ.ರಾಮದಾಸ್, ಎಲ್.ನಾಗೇಂದ್ರ, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಹೆಚ್.ವಿ.ರಾಜೀವ್ ಮತ್ತಿತರರು ಉಪಸ್ಥಿತರಿದ್ದರು. ಇದೇ ವೇಳೆ ದಸರಾವನ್ನು ಯಶಸ್ವಿಗೊಳಿಸಿಕೊಟ್ಟಿದ್ದಕ್ಕಾಗಿ ಸಚಿವರನ್ನು ಶಾಸಕ ಎಸ್.ಎ.ರಾಮದಾಸ್ ಸನ್ಮಾನಿಸಿ, ಅಭಿನಂದಿಸಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss