Wednesday, August 10, 2022

Latest Posts

ನ.13ರಿಂದ ಪ್ರವಾಸಿಗರಿಗೆ ತೆರೆದುಕೊಳ್ಳಲಿದೆ ಹಾರಂಗಿ ಉದ್ಯಾನವನ

ಹೊಸದಿಗಂತ ವರದಿ, ಕುಶಾಲನಗರ:

ಇಲ್ಲಿಗೆ ಸಮೀಪದ ಹಾರಂಗಿ ಜಲಾಶಯದ ಮುಂಭಾಗದಲ್ಲಿರುವ ಉದ್ಯಾನವನ ನ.13ರಿಂದ ಪ್ರವಾಸಿಗರ ವೀಕ್ಷಣೆಗೆ ತೆರೆದುಕೊಳ್ಳಲಿದೆ.

ಕೊರೋನಾ ಸಾಂಕ್ರಮಿಕದ ಹಿನ್ನೆಲೆಯಲ್ಲಿ ಸರಕಾರದ ನಿಯಮನುಸಾರವಾಗಿ ಹಾರಂಗಿಯ ಉದ್ಯಾನವನದ ವೀಕ್ಷಣೆಗೆ ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿತ್ತು. ಇದೀಗ ಜಿಲ್ಲಾಧಿಕಾರಿಯ ಗಮನಕ್ಕೆ ತಂದು ಕಾವೇರಿ ನೀರಾವರಿ ನಿಗಮದ ಅದೇಶದಂತೆ ಮತ್ತು ಕೊರೋನಾದ ನಿಯಮಾವಳಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದರೊಂದಿಗೆ ಇನ್ನು ಎರಡು ದಿನಗಳಲ್ಲಿ ಉದ್ಯಾನವನದ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗುತ್ತದೆ ಎಂದು ಕಾರ್ಯಪಾಲಕ ಅಭಿಯಂತರ ರಾಜೇಗೌಡ ತಿಳಿಸಿದ್ದಾರೆ.

ರಾಜ್ಯದ ಎಲ್ಲಾ ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರಿಗೆ ಕೊರೋನಾ ನಿಯಮಗಳನ್ನು ಪಾಲಿಸಿ ಸಾಮಾಜಿಕ ಅಂತರ ಕಾಯ್ದುಕೊಂಡು ವೀಕ್ಷಣೆ ಮಾಡಲು ಅವಕಾಶ ಕಲ್ಪಿಸಲು ಹಾಗೂ ಪ್ರವಾಸಿಗರಿಗೆ ಸರಕಾರ ನಿಗದಿಪಡಿಸಿದ ದರದ ಪಟ್ಟಿಯ ಅನ್ವಯ ಪ್ರವೇಶ ಶುಲ್ಕವನ್ನು ವಿಧಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈಗಾಗಲೇ ಪ್ರವಾಸಿಗರಿಗೆ ಟಿಕೆಟ್ ನೀಡಲು ಅಗತ್‍ಕೆಟ್ ನೀಡಲು ಅಗತ್ಯವಿರುವ ಕೊಠಡಿಯನ್ನು ಸಜ್ಜುಗೊಳಿಸಲಾಗಿದ್ದು, ಇದರೊಂದಿಗೆ ಉದ್ಯಾನವನದ ಸುತ್ತಮುತ್ತಲಿನ ಶುಚಿತ್ವದ ಕಾರ್ಯ ಮುಕ್ತಾಯಗೊಂಡಿದೆ. ಸಂಜೆಯ ಸಂಗೀತ ಕಾರಂಜಿ ಪ್ರಾರಂಭದ ಪ್ರಕ್ರಿಯೆ ಪೂರ್ಣಗೊಂಡಿದ್ದು, ಅಣೆಕಟ್ಟೆಯ ಭದ್ರತೆಯ ದೃಷ್ಟಿಯನ್ನು ಗಮನದಲ್ಲಿರಿಸಿಕೊಂಡು ಬೃಂದಾವನದ ವೀಕ್ಷಣೆಗೆ ಅವಕಾಶ ನೀಡಲಾಗುವುದು ಎಂದು ಸಹಾಯಕ ಕಾರ್ಯಪಾಲಕ ಅಭಿಯಂತರ ಮಹೇಂದ್ರ ಕುಮಾರ ತಿಳಿಸಿದ್ದಾರೆ.

ಹಾರಂಗಿ ಅಣೆಕಟ್ಟೆಯ ಮುಂಭಾಗದ ಬೃಂದಾವನದ ವೀಕ್ಷಣೆಗೆ ಅವಕಾಶ ಕಲ್ಪಿಸುವಂತೆ ಕೂಡುಮಂಗಳೂರು ಗ್ರಾಮ ಪಂಚಾಯತಿ ಮಾಜಿ ಸದಸ್ಯ ಭಾಸ್ಕರ ನಾಯಕ್ ಮತ್ತು ಸ್ಥಳೀಯ ನೂರಾರು ಗ್ರಾಮಸ್ಥರು ಶಾಸಕರಿಗೆ ಹಾಗೂ ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದನ್ನು ಇಲ್ಲಿ ಸ್ಮರಿಸಬಹುದಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss