Tuesday, July 5, 2022

Latest Posts

ನ.16ರಿಂದ ಧಾರ್ಮಿಕ ಕ್ಷೇತ್ರಗಳ ಪುನಾರಂಭಕ್ಕೆ ಅಸ್ತು ಎಂದ ಮಹಾರಾಷ್ಟ್ರ ಸರ್ಕಾರ

ಹೊಸದಿಗಂತ ಆನ್ ಲೈನ್ ಡೆಸ್ಕ್:

ನ.16 ಸೋಮವಾರದಿಂದ ಮಹಾರಾಷ್ಟ್ರದಲ್ಲಿನ ಧಾರ್ಮಿಕ ಕ್ಷೇತ್ರಗಳ ಪುನಾರಂಭಕ್ಕೆ ರಾಜ್ಯ ಸರ್ಕಾರ ಅನುಮತಿ ನೀಡಿದೆ.

ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಾಗಿದ್ದ ಹಿನ್ನಲೆ ರಾಜ್ಯಾದ್ಯಂತ ಧಾರ್ಮಿಕ ಕ್ಷೇತ್ರಗಳನ್ನು ಮುಚ್ಚಲಾಗಿದ್ದು, ಸುಮಾರು 8 ತಿಂಗಳ ಬಳಿಕ ಎಲ್ಲಾ ಧಾರ್ಮಿಕ ಕ್ಷೇತ್ರಗಳು ತೆರೆಯಲಿದೆ.

ದೇಶದ ಅನೇಕ ರಾಜ್ಯಗಳು ಧಾರ್ಮಿಕ ಕ್ಷೇತ್ರಗಳನ್ನು ಪುನಾರಂಭಕ್ಕೆ ಅವಕಾಶ ನೀಡಿದ್ದರು. ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಮೊದಲ ಸ್ಥಾನದಲ್ಲಿರುವ ಮಹಾರಾಷ್ಟ್ರ ಸರ್ಕಾರ ಮಾತ್ರ ದೇವಾಲಯಗಳನ್ನು ತೆರೆಯಲು ಅನುಮತಿ ನೀಡಿರಲಿಲ್ಲ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss