Monday, July 4, 2022

Latest Posts

ನ.26 ರಂದು ನಡೆಯಲಿರುವ ದತ್ತಮಾಲಾ ಅಭಿಯಾನಕ್ಕೆ ಪ್ರವಾಸಿಗರಿಗಿಲ್ಲ ಪ್ರವೇಶ

ಹೊಸ ದಿಗಂತ ವರದಿ, ಚಿಕ್ಕಮಗಳೂರು:

ಶ್ರೀರಾಮಸೇನೆ ಸಂಘಟನೆಯು ದತ್ತಪೀಠದಲ್ಲಿ ನ.26 ರಂದು ದತ್ತಮಾಲಾ ಅಭಿಯಾನ ಹಮ್ಮಿಕೊಂಡಿರುವ ಹಿನ್ನೆಲೆಯಲ್ಲಿ ಅಂದು ಪ್ರವಾಸಿಗರು ದತ್ತಪೀಠಕ್ಕೆ ಭೇಟಿ ನೀಡುವುದಕ್ಕೆ ಜಿಲ್ಲಾಡಳಿತ ನಿರ್ಬಂಧ ಹೇರಿದೆ.
ಶ್ರೀ ರಾಮಸೇನಾ ಕಾರ್ಯಕರ್ತರು ಪೀಠಕ್ಕೆ ಆಗಮಿಸುವ ಹಿನ್ನಲೆಯಲ್ಲಿ ನವೆಂಬರ್ 26 ರಂದು ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಪ್ರವಾಸಿಗರು ಬರುವುದನ್ನು ಹಾಗೂ ಉದ್ದ ಚಾಸಿ ವುಳ್ಳ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಅಂದು ಭಕ್ತಾಧಿಗಳಿಗೆ ಪಾದುಕೆಗಳ ದರ್ಶನಕ್ಕೆ ಬೆಳಿಗ್ಗೆ 8 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಅವಕಾಶ ಕಲ್ಪಿಸಲಾಗಿದೆ. ಭಕ್ತಾಧಿಗಳಿಗೆ ಕುಡಿಯುವ ನೀರು, ನೆರಳಿನ ವ್ಯವಸ್ಥೆ, ವೈದ್ಯಕೀಯ ಸೇವೆ, ಶೌಚಾಲಯ, ರಸ್ತೆ ದುರಸ್ಥಿ ಸೌಕರ್ಯಗಳನ್ನು ಕಲ್ಪಿಸಲಾಗಿದ್ದು, ಸಂಸ್ಥೆಯ ಆವರಣದಲ್ಲಿ ಪ್ಲಾಸ್ಟಿಕ್ ಬಳಕೆಯನ್ನು ಹಾಗೂ ಗುಹೆಯ ಒಳಭಾಗದಲ್ಲಿ ಕ್ಯಾಮೆರಾ, ವಿಡಿಯೋ ಕ್ಯಾಮೆರಾ, ಮೊಬೈಲ್ ಬಳಕೆಯನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss