Saturday, June 25, 2022

Latest Posts

ನ. 30ರಂದು ಹಿರೇಕೆರೂರ, ಹಾವೇರಿಯಲ್ಲಿ ಗ್ರಾಮ ಸ್ವರಾಜ್ಯ ಸಮಾವೇಶ

ಹೊಸದಿಗಂತ ವರದಿ ಹಾವೇರಿ:

ಗ್ರಾಮ ಪಂಚಾಯತ್ ಚುನಾವಣೆಗಳು ಕಾರ್ಯಕರ್ತರ ಚುನಾವಣೆಯಾಗಿದ್ದು ಹೆಚ್ಚಿನ ಸಂಖ್ಯೆಯಲ್ಲಿ ಪಕ್ಷದ ಬೆಂಬಲಿತ ಅಭ್ಯರ್ಥಿಗಳು ಆಯ್ಕೆ ಆಗುವದಕ್ಕೆ ಪಕ್ಷ ಹೆಚ್ಚಿನ ಆದ್ಯತೆಯನ್ನು ನೀಡುತ್ತಿದೆ ಎಂದು ಬಿಜೆಪಿ ಯುವ ಮೂರ್ಚಾದ ರಾಜ್ಯಾಧ್ಯಕ್ಷ ಡಾ. ಸಂದೀಪ ಹೇಳಿದರು.

ನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಸಾಮಾನ್ಯ ಕಾರ್ಯಕರ್ತರನ್ನು ನಾಯಕರನ್ನಾಗಿ ಮಾಡುವ ಪಕ್ಷವಾಗಿದ್ದು ಈ ಹಿನ್ನಲೆಯಲ್ಲಿ ಗ್ರಾಮ ಪಂಚಾಯತ್ ಚುನಾವಣೆಗಳ ಗಂಭೀರವಾಗಿ ಪರಿಗಣಿಸಿರುವ ಪಕ್ಷ, ಗ್ರಾಮೀಣ ಮಟ್ಟದಲ್ಲಿರುವ ಕಾರ್ಯಕರ್ತರನ್ನು ನಾಯಕರನ್ನಾಗಿ ಮಾಡುವುದಕ್ಕೆ ರಾಜ್ಯ ನಾಯಕರು, ಜಿಲ್ಲಾ ಹಾಗೂ ಸ್ಥಳೀಯ ಮಟ್ಟದ ನಾಯಕರು ಸಂಪೂರ್ಣವಾಗಿ ತೊಡಗಿಸಿಕೊಂಡಿದ್ದಾರೆ ಎಂದು ತಿಳಿಸಿದರು.

ದೇಶದ ಮತ್ತು ರಾಜ್ಯದಲ್ಲಿ ಕಾಂಗ್ರಸ್ ಮುಕ್ತವನ್ನಾಗಿ ಮಾಡುವುದಕ್ಕೆ ಕೇಂದ್ರ ಮತ್ತು ರಾಜ್ಯ ಬಿಜೆಪಿ ನಾಯಕರು ಸಂಕಲ್ಪ ಮಾಡಿದ್ದು ಅದಕ್ಕಾಗಿ ಗ್ರಾಮೀಣ ಮಟ್ಟದಲ್ಲಿ ಪಕ್ಷದ ಕಾರ್ಯಕರ್ತರನ್ನು ಗ್ರಾ.ಪಂ ಚುನಾವಣೆಯಲ್ಲಿ ಆಯ್ಕೆ ಮಾಡುವುದಕ್ಕೆ ಸಿದ್ಧವಾಗುತ್ತಿದೆ ಎಂದರು.

ಗ್ರಾ.ಪಂ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನಗಳನ್ನು ಯುವ ಜನಾಂಗಕ್ಕೆ ನೀಡುವ ಮೂಲಕ ಮುಂಬರುವ ದಿನಗಳಲ್ಲಿ ಪಕ್ಷದ ಬಲವರ್ಧನೆಗೆ ನಾಂದಿ ಹಾಡುವಂತೆ ಜಿಲ್ಲಾಧ್ಯಕ್ಷ ಹಾಗೂ ಶಾಸಕರಲ್ಲಿ ಮನವಿ ಮಾಡಿಕೊಂಡರು.

ಶಾಸಕ ನೆಹರು ಓಲೇಕಾರ ಮಾತನಾಡಿ, ಕಳೆದ ಅವಧಿಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳ ಸಂಖ್ಯೆಗಿಂತ ಪ್ರಸಕ್ತ ಚುನಾವಣೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಕ್ಷದ ಬೆಂಬಲಿತ ಅಭ್ಯರ್ಥಿಗಳನ್ನು ಗ್ರಾ.ಪಂ ಚುನಾವಣೆಯಲ್ಲಿ ಆಯ್ಕೆ ಮಾಡುವ ದೃಷ್ಟಿಯಿಂದ ರಾಜ್ಯದ ಪ್ರಮುಖ ನಾಯಕರನ್ನೊಳಗೊಂಡ ನಾಲ್ಕು ತಂಡಗಳು ರಾಜ್ಯಾದ್ಯಂತ ಗ್ರಾಮ ಸ್ವರಾಜ್ಯ ಸಮಾವೇಶಗಳಲ್ಲಿ ಪಾಲ್ಗೊಳ್ಳುತ್ತಿದ್ದಾರೆ ಎಂದು ಹೇಳಿದರು.
ಸರ್ಕಾರ ಅಧಿಕಾರಕ್ಕೆ ಬಂದ ನಂತರದಲ್ಲಿ ಅತಿವೃಷ್ಠಿ, ನೆರೆ ಸಂತ್ರಸ್ತರ ನೆರವಿಗೆ ಬಂದದ್ದು ಹಾಗೂ ಇವರೆಗೆ ಸರ್ಕಾರದ ಅಭಿವೃದ್ಧಿ ಕಾರ್ಯಗಳನ್ನು ಗಮನಿಸಿ ಗ್ರಾ.ಪಂ ಚುನಾವಣೆಯಲ್ಲಿ ಜನತೆ ಹೆಚ್ಚಿನ ಸಂಖ್ಯೆಯಲ್ಲಿ ಪಕ್ಷದ ಬೆಂಬಲಿತ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಿದ್ದಾರೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು.

ಜಿಲ್ಲಾಧ್ಯಕ್ಷ ಸಿದ್ಧರಾಜ ಕಲಕೋಟಿ ಮಾತನಾಡಿ, ನ.೩೦ ರಂದು ಹಿರೇಕೆರೂರ ರಾಣೇಬೆನ್ನೂರ ಹಾಗೂ ಬ್ಯಾಡಗಿ ವಿಧಾನಸಭಾ ಕ್ಷೇತ್ರಗಳನ್ನೊಳಗೊಂಡ ಗ್ರಾಮ ಸ್ವರಾಜ್ಯ ಸಮಾವೇಶವನ್ನು ಹಿರೇಕೆರೂರದಲ್ಲಿ ಬೆಳಿಗ್ಗೆ ಮತ್ತು ಹಾವೇರಿ, ಹಾನಗಲ್ ಹಾಗೂ ಶಿಗ್ಗಾಂವ ವಿಧಾನಸಭಾ ಕ್ಷೇತ್ರಗಳನ್ನೊಳಗೊಂಡ ಗ್ರಾಮ ಸ್ವರಾಜ್ಯ ಸಮಾವೇಶವನ್ನು ಹಾವೇರಿಯಲ್ಲಿ ಆಯೋಜನೆ ಮಾಡಲಾಗಿದೆ ಎಂದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss