ಹೊಸ ದಿಗಂತ ವರದಿ, ಮೈಸೂರು:
ಮೀಸಲಾತಿ ಗಾಗಿ ಪಂಚಮಸಾಲಿ ಪೀಠದ ಸ್ವಾಮಿಗಳು ನಡೆಸುತ್ತಿರುವ ಹೋರಾಟ ವನ್ನು ದಿಕ್ಕು ತಪ್ಪಿಸುವ ಕೆಲಸವನ್ನು ನಾನು ಮಾಡಿಲ್ಲ ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ವಿಜಯೇಂದ್ರ ತಿಳಿಸಿದರು.
ಶನಿವಾರ ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೀಸಲಾತಿ ಗಾಗಿ ಈಗ ಅನೇಕ ಸಮುದಾಯಗಳು ಹೋರಾಟ ಮಾಡುತ್ತಿವೆ. ಮೀಸಲಾತಿ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಅದೇ ರೀತಿ ಪಂಚಮಸಾಲಿ ಪೀಠದ ಸ್ವಾಮಿಗಳು ಮೀಸಲಾತಿ ಗಾಗಿ ಹೋರಾಟ ನಡೆಸುತ್ತಿದ್ದಾರೆ. ಆದರೆ ಇವರ ಹೋರಾಟ ದ ವಿಚಾರದಲ್ಲಿ ಅನವಶ್ಯಕ ವಾಗಿ ನನ್ನ ಹೆಸರು ತೆಗೆದು ಕೊಳ್ಳುತ್ತಿದ್ದಾರೆ. ಇದು ಸರಿಯಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದರು. ಸ್ವಾಮೀಜಿಗಳು ಹೋರಾಟ ಮಾಡಲಿ, ಆದರೆ ರಾಜಕೀಯ ಅಸ್ತಿತ್ವ ಕಳೆದುಕೊಂಡವರು, ಈ ಹೋರಾಟದಲ್ಲಿ ಸೇರಿಕೊಂಡು ತಮ್ಮ ಬೇಳೆ ಬೇಯಿಸಿ ಕೊಳ್ಳುವ ಪ್ರಯತ್ನ ನಡೆಸುತ್ತಿದ್ದಾರೆ. ಇದಕ್ಕೆ ಅವಕಾಶ ನೀಡಬಾರದು. ಜಾತಿ,ಜಾತಿಗಳನ್ನು ಒಡೆಯ ಕೆಲಸ ಮಾಡಬಾರದು ಎಂದರು. ಎಲ್ಲಾ ಸಮುದಾಯಗಳ ಬಗ್ಗೆ ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಅಪಾರ ಗೌರವ ಹೊಂದಿದ್ದಾರೆ. ಆದರೆ ಮೀಸಲಾತಿ ಯಂತಹ ಗಂಭೀರ ವಿಷಯದ ಬಗ್ಗೆ ಹಾದಿ, ಬೀದಿಯಲ್ಲಿ ಚರ್ಚೆ ಮಾಡುವ ಮೂಲಕ ಯಡಿಯೂರಪ್ಪ ಅವರಿಗೆ ಸವಾಲು ಹಾಕುವ ಕೆಲಸ ಮಾಡಬಾರದು. ನಾವು ಎಲ್ಲಾ ಸಮುದಾಯದ ಸ್ವಾಮಿಗಳ ಬಗ್ಗೆ ಅಪಾರ ಗೌರವ ವಿಟ್ಟುಕೊಂಡಿದ್ದೇವೆ, ಇದನ್ನು ನಾವು ಯಾರಿಂದಲೂ ಕಲಿಯಬೇಕಾಗಿಲ್ಲ ಎಂದು ಟೀಕಾಕಾರರಿಗೆ ತಿರುಗೇಟು ನೀಡಿದರು. ರಾಜ್ಯ ಬಿಜೆಪಿ ಉಪಾಧ್ಯಕ್ಷ ನಾಗಿ ಪಕ್ಷದ ಕೆಲಸವನ್ನು ಮಾಡಿಕೊಂಡು ಹೋಗುತ್ತಿದ್ದೇನೆ, ಟೀಕೆಗಳಿಗೆ ತಲೆ ಕೆಡಿಸಿಕೊಳ್ಳುವುದಿಲ್ಲ ಎಂದರು.