ಶ್ರೀನಗರ(ಜಮ್ಮು ಕಾಶ್ಮೀರ): ಕಳೆದ ರಾತ್ರಿ ಜಮ್ಮು ಕಾಶ್ಮೀರದ ಪಂಥಾ ಚೌಕ್ ನಲ್ಲಿ ಉಗ್ರರು ಹಾಗೂ ಭದ್ರತಾಪಡೆಗಳ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಅದರಲ್ಲಿ ಮೂವರು ಉಗ್ರರನ್ನು ಭಾರತೀಯ ಭದ್ರತಾ ಪಡೆ ಹೊಡೆದುರುಳಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಬಗ್ಗೆ ಮಾತನಾಡಿದ ಪೊಲೀಸ್ ಅಧಿಕಾರಿ, ಶನಿವಾರ ರಾತ್ರಿ ಪಂಥಾ ಚೌಕ್ ನಲ್ಲಿ ಗುಂಡಿನ ದಾಳಿ ನಡೆದಿದ್ದು, ಈ ವೇಳೆ ನಾಕಾದ ಕಶ್ಮೀರದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಅಸಿಸ್ಟೆಂಟ್ ಸಬ್ ಇನ್ಸ್ ಪೆಕ್ಟರ್ ಬಾಬು ರಾಮ್ ಅವರು ಹುತಾತ್ಮರಾಗಿದ್ದಾರೆ.
ಇದಕ್ಕೆ ತಕ್ಕ ಪ್ರತ್ಯುತ್ತರ ನೀಡಿದ ಭದ್ರತಾ ಪಡೆ ಮತ್ತು ಪೊಲೀಸರು ಮೂವರು ಉಗ್ರರನ್ನು ಹೊಡೆದುರುಳಿಸಿದ್ದಾರೆ. ಮತ್ತಷ್ಟು ಉಗ್ರರ ಪತ್ತೆ ಹಚ್ಚಲು ಸ್ಥಳದಲ್ಲಿ ಕಾರ್ಯಾಚರಣೆ ಮುಂದುವರೆಸಲಾಗಿದೆ.