Friday, August 19, 2022

Latest Posts

ಪಕ್ಷದ ತತ್ತ್ವ ಸಿದ್ಧಾಂತಕ್ಕೆ ಯಾರಾದರೂ ಅಡ್ಡಿ ಬಂದರೆ ಸಹಿಸುವುದಿಲ್ಲ: ಶಾಸಕ ಡಾ.ಭರತ್ ಶೆಟ್ಟಿ

ಹೊಸದಿಗಂತ ವರದಿ ಮಂಗಳೂರು :

ನಮಗೆ ಕ್ಷೇತ್ರದ ಅಭಿವೃದ್ಧಿಯ ಜೊತೆಗೆ ಕಾರ್ಯಕರ್ತರ ಹಿತ ಬಹಳ ಮುಖ್ಯ.ನಮ್ಮ ಪಕ್ಷದ ತತ್ವ, ಸಿದ್ಧಾಂತಕ್ಕೆ ಯಾರಾದರೂ ಅಡ್ಡಿ ಬಂದರೆ ಸಹಿಸುವುದಿಲ್ಲ ಎಂದು ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ವೈ ಭರತ್ ಶೆಟ್ಟಿ ಹೇಳಿದ್ದಾರೆ.
ಅವರು ಭಾನುವಾರ ಭಾರತೀಯ ಜನತಾ ಪಕ್ಷದ ನೀರುಮಾರ್ಗ ಮಹಾಶಕ್ತಿ ಕೇಂದ್ರದ ಕಾರ್ಯಕಾರಿಣಿ ಸಭೆಯಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು.
ಪಕ್ಷದ ಹಾಗೂ ಕಾರ್ಯಕರ್ತರ ಹಿತ ಕಾಯಲು ಸದಾ ಬದ್ಧ. ಕೆಲವರು ಪಕ್ಷ ಸಿದ್ಧಾಂತಗಳಿಗೆ ಅಡ್ಡಿ ಪಡಿಸಲು ಯತ್ನಿಸುತ್ತಿದ್ದು ಅದನ್ನು ಸಹಿಸುವುದಿಲ್ಲ. ಅಭಿವೃದ್ಧಿ ವಿಚಾರದಲ್ಲಿ ರಾಜಿ ಮಾಡಿಕೊಳ್ಳುವ ಪ್ರಶ್ನೆಯೂ ಇಲ್ಲ. ತನ್ನ ಕ್ಷೇತ್ರದ ಅಭಿವೃದ್ಧಿಗೆ ವಿಶೇಷ ಒತ್ತು ನೀಡುತ್ತಿರುವುದಾಗಿ ಅವರು ಹೇಳಿದರು.
ಮಂಡಲ ಅಧ್ಯಕ್ಷರಾದ ತಿಲಕ್ ರಾಜ್ ಕೃಷ್ಣಾಪುರ, ಪ್ರಧಾನ ಕಾರ್ಯದರ್ಶಿ ರಾಜೇಶ್ ಕೊಟ್ಟಾರಿ, ಯುವ ಮೋರ್ಚಾ ಅಧ್ಯಕ್ಷ ಭರತ್ ರಾಜ್ ಕೃಷ್ಣಾಪುರ,ಮಂಡಲ ಉಪಾಧ್ಯಕ್ಷ ಲಕ್ಷ್ಮಣ್ ಶೆಟ್ಟಿಗಾರ್, ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಸಚಿನ್ ಹೆಗ್ಡೆ, ಮಾಧವ್ ಟೈಲರ್ ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯರು,ರಾಜೀವ್ ಶೆಟ್ಟಿ ಜಿಲ್ಲಾ ರೈತ ಮೋರ್ಚಾ ಉಪಾಧ್ಯಕ್ಷ ಹಾಗೂ ಶಕ್ತಿ ಕೇಂದ್ರ ಪ್ರಮುಖರುಗಳು, ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!