Monday, November 28, 2022

Latest Posts

ಪಕ್ಷವನ್ನು ಬೇರು ಮಟ್ಟದಿಂದ ಸಂಘಟಿಸಿ: ರಾಜೇಶ ಜಿ

ಹೊಸದಿಗಂತ ವರದಿ ಯಾದಗಿರಿ:
ವ್ಯಕ್ತಿಗಿಂತ ಪಕ್ಷ, ಪಕ್ಷಕ್ಕಿಂತ ದೇಶ ಮೊದಲು ಎಂಬ ಸಿದ್ಧಾಂತದೊಂದಿಗೆ ಪ್ರತಿಯೊಬ್ಬರಲ್ಲೂ ಬಿಜೆಪಿ ರಾಷ್ಟ್ರಾಭಿಮಾನ ಮೂಡಿಸುತ್ತಿದೆ ಎಂದು ಪಕ್ಷದ ರಾಜ್ಯ ಸಂಘಟನಾ ಪ್ರಧಾನ ಕಾರ್ಯದಶಿ ರಾಜೇಶ ಜಿ ತಿಳಿಸಿದರು.
ಸೋಮವಾರ ಸಂಜೆ ನಗರದ ಖಾಸಗಿ ಹೊಟೆಲ್ ಸಭಾಂಗಣದಲ್ಲಿ ಕರೆದಿದ್ದ ಜಿಲ್ಲಾ ಪದಾಕಾರಿಗಳ ಸಭೆ ಉದ್ಘಾಟಿಸಿ ಮಾತನಾಡಿ, ನಮ್ಮದು ರಾಜಕೀಯ ಪಕ್ಷಆಗಿದ್ದರೂ ಕಾರ್ಯಕರ್ತರಿಗೆ ಮೊದಲು ದೇಶಾಭಿಮಾನದ ಬಗ್ಗೆ ತಿಳಿಸಿಕೊಡುತ್ತೇವೆ. ನಂತರ ಶಿಸ್ತು ಹಾಗೂ ಸಂಘಟನೆ ಇವು ನಮ್ಮ ಸಿದ್ಧಾಂತಗಳಾಗಿವೆ ಎಂದರು.

ಪಕ್ಷ ಬಲವರ್ಧನೆಗೆ ಕಾರ್ಯಕರ್ತರೇ ಬುನಾದಿಯಾಗಿದ್ದಾರೆ. ಈ ಕಾರಣದಿಂದಲೇ ಬಿಜೆಪಿ ಇಂದು ಜಾಗತಿಕ ಮಟ್ಟದಲ್ಲಿ ಅತೀಹೆಚ್ಚು ಸದಸ್ಯರನ್ನು ಹೊಂದಿದ ರಾಜಕೀಯ ಪಕ್ಷ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಜನಸಂಘ ಕಾಲದಿಂದಲೂ ದೇಶದ ಅಭಿವೃದ್ಧಿಯ ಬಗ್ಗೆ ನಾವು ಹೋರಾಡುತ್ತಲೇ ಬಂದಿದ್ದೇವೆ. ಪಂ.ದೀನ್‌ದಯಾಳ್ ಉಪಾಧ್ಯಾಯ, ಡಾ.ಶಾಮ್ ಪ್ರಸಾದ್ ಮುಖರ್ಜಿ, ಅಟಲ್ಜೀ ಸೇರಿದಂತೆ ನೂರಾರು ದಿಗ್ಗಜರು ದೇಶದ ಸಂಸ್ಕೃತಿ, ಸಂಸ್ಕಾರಗಳೊಂದಿಗೆ ರಾಷ್ಟ್ರಸೇವೆ ತಮ್ಮನ್ನು ಸಮರ್ಪಣೆ ಮಾಡಿಕೊಂಡಿದ್ದಾರೆ. ಯುವ ಕಾರ್ಯಕರ್ತರು ಅವರನ್ನು ಆದರ್ಶವಾಗಿಟ್ಟುಕೊಂಡು ಪಕ್ಷವನ್ನು ಬೇರು ಮಟ್ಟದಿಂದ ಸಂಘಟಿಸಬೇಕು ಎಂದು ಸಲಹೆ ನೀಡಿದರು.
ಕೇಂದ್ರ ಹಾಗೂ ರಾಜ್ಯದಲ್ಲಿ ನಮ್ಮ ಸರ್ಕಾರ ಜನರ ಕಲ್ಯಾಣಕ್ಕಾಗಿ ಜಾರಿಗೊಳಿಸಿದ ಯೋಜನೆಗಳ ಬಗ್ಗೆ ಮತದಾರರಿಗೆ ಮನವರಿಕೆ ಮಾಡಿಕೊಡುವ ಕೆಲಸ ಪ್ರತಿಯೊಬ್ಬ ಕಾರ್ಯಕರ್ತರು ಮಾಡಬೇಕು ಎಂದು ಕಿವಿಮಾತು ಹೇಳಿದರು.

ಶಾಸಕ ವೆಂಕಟರಡ್ಡಿ ಮುದ್ನಾಳ್, ಜಿಲ್ಲಾ ಪ್ರಭಾರಿ ಅಮರನಾಥ ಪಾಟೀಲ್, ಜಿಲ್ಲಾಧ್ಯಕ್ಷ ಡಾ.ಶರಣಭುಪಾಲರಡ್ಡಿ ನಾಯ್ಕಲ್, ಮಾಜಿ ಶಾಸಕ ಡಾ.ವೀರಬಸವಂತರಡ್ಡಿ ಮುದ್ನಾಳ್, ವಿಭಾಗೀಯ ಸಹ ಪ್ರಭಾರಿ ಈಶ್ವರಸಿಂಗ್ ಠಾಕೂರ, ವೆಂಕಟರಡ್ಡಿ ಅಬ್ಬೆತುಮಕೂರ ಇತರರು ಇದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!