Saturday, June 25, 2022

Latest Posts

ಪಕ್ಷವಿರೋಧಿ ಚಟುವಟಿಕೆ ಆರೋಪದ ಮೇಲೆ ಜಿ.ಪಂ.ಅಧ್ಯಕ್ಷೆ ಸುಜಾತ ಕೃಷ್ಣಪ್ಪ ಅಮಾನತು

ಹೊಸ ದಿಗಂತ ವರದಿ, ಚಿಕ್ಕಮಗಳೂರು:

ಪಕ್ಷವಿರೋಧಿ ಚಟುವಟಿಕೆ ಆರೋಪದ ಮೇಲೆ ಜಿಲ್ಲಾ ಪಂಚಾಯ್ತಿ ಅಧ್ಯಕ್ಷೆ ಸುಜಾತ ಕೃಷ್ಣಪ್ಪ ಅವರನ್ನು ಭಾರತೀಯ ಜನತಾ ಪಕ್ಷದಿಂದ ಅಮಾನತುಗೊಳಿಸಿ ಪಕ್ಷದ ರಾಜ್ಯಾಧ್ಯಕ್ಷ ನಳೀನ್‍ಕುಮಾರ್ ಕಟೀಲ್ ಆದೇಶಿಸಿದ್ದಾರೆ.
ಕಳೆದ ಕೆಲ ತಿಂಗಳಿನಿಂದ ಪಕ್ಷದ ತೀರ್ಮಾನಗಳನ್ನು ಪದೇ ಪದೇ ಉಲ್ಲಂಘಿಸಿ, ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿಕೊಂಡಿದ್ದು, ಪಕ್ಷದ ಘನತೆಗೆ ಕುಂದುಂಟುಮಾಡಿ ಮುಜುಗುರಕ್ಕೆ ಕಾರಣರಾಗಿದ್ದೀರಿ. ಅಲ್ಲದೆ ಹಲವು ಬಾರಿ ಖುದ್ದು ಹಾಜರಾಗಿ ಸಮಜಾಯಿಷಿ ನೀಡಲು ತಿಳಿಸಿದರೂ ಇದುವರೆಗೂ ಸಮಜಾಯಿಷಿ ನೀಡಿರುವುದಿಲ್ಲ. ಈ ಹಿನ್ನೆಲೆಯಲ್ಲಿ ತಕ್ಷಣದಿಂದ ಜಾರಿಗೆ ಬರುವಂತೆ ಪಕ್ಷದಿಂದ ತಮ್ಮನ್ನು ಅಮಾನತುಪಡಿಸಲಾಗಿದೆ ಎಂದು ಆದೇಶ ಪತ್ರದಲ್ಲಿ ರಾಜ್ಯಾಧ್ಯಕ್ಷ ನಳೀನ್‍ಕುಮಾರ್ ಕಟೀಲ್ ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss