spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Friday, September 17, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಪಠ್ಯದಿಂದ ನಾಯಕರ ಇತಿಹಾಸ ಕೈ ಬಿಟ್ಟ ಸರ್ಕಾರ: ಪ್ರತಿಭಟನೆ

- Advertisement -Nitte

ಮೈಸೂರು: ಸ್ವಾತಂತ್ರ್ಯಕ್ಕಾಗಿ ಹೋರಾಟ ನಡೆಸಿದ ಕೆಲ ನಾಯಕರ ಇತಿಹಾಸದ ಪಠ್ಯವನ್ನು ಪುಸ್ತಕದಿಂದ ರಾಜ್ಯ ಸರ್ಕಾರ ಕೈಬಿಟ್ಟಿರುವುದನ್ನು ವಿರೋಧಿಸಿ ಪ್ರಗತಿಪರ ಸಂಘಟನೆಗಳ ಒಕ್ಕೂಟದಿಂದ ಶುಕ್ರವಾರ ಮೈಸೂರಿನಲ್ಲಿ ಪ್ರತಿಭಟನೆ ನಡೆಸಲಾಯಿತು.
ನಗರದ ಪುರಭವನದ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಮುಂಭಾಗ ಜಮಾಯಿಸಿದ ಪ್ರತಿಭಟನಾಕಾರರು, ಕೆಲಕಾಲ ಧರಣಿ ನಡೆಸಿ, ನಾನಾ ಘೋಷಣೆಗಳನ್ನು ಕೂಗಿದರು.
ಸಂಗೊಳ್ಳಿ ರಾಯಣ್ಣ, ರಾಣಿ ಅಬ್ಬಕ್ಕ, ಟಿಪ್ಪು, ಏಸುಕ್ರಿಸ್ತ, ಪ್ರವಾದಿ, ಸಂವಿಧಾನ ಮೊದಲಾದ ವಿಷಯಕ್ಕೆ ಸಂಬಂಧಿಸಿದ ಪಠ್ಯವನ್ನು ಶಾಲಾ ಪಠ್ಯಕ್ರಮದಿಂದ ಕೈಬಿಟ್ಟಿರುವುದು ದುರ್ದೈವ ದ ಸಂಗತಿ. ಟಿಪುö್ಪ ಕುರಿತು ಇರುವ ಇತಿಹಾಸವನ್ನು ಪಠ್ಯದಿಂದ ತೆಗೆದು ಹಾಕುವ ನಿರ್ಧಾರಕ್ಕೆ ಸರ್ಕಾರ ಹೊರಟಿರುವುದು ಖಂಡನೀಯ ಎಂದರು. ಬ್ರೀಟಿಷರ ವಿರುದ್ಧ ಟಿಪ್ಪು ಸುಲ್ತಾನ್ ಪಟ್ಟ ಕಷ್ಟದ ಹೋರಾಟವನ್ನು ನಾಶಪಡಿಸುತ್ತಿರುವುದು ದುರ್ದೈವ ದ ಸಂಗತಿ. ಸಂಗೊಳ್ಳಿ ರಾಯಣ್ಣ, ರಾಣಿ ಅಬ್ಬಕ್ಕ, ಟಿಪ್ಪು ಸುಲ್ತಾನ್ ಇವರೆಲ್ಲ ದೇಶಭಕ್ತರು. ಅವರಿಗೆ ಗೌರವ ನೀಡುವುದು ಯುವಜನತೆಯ ಕರ್ತವ್ಯ ಟಿಪ್ಪು ವಿಚಾರ ಮಾತ್ರವಲ್ಲದೆ ಸಂವಿಧಾನ ಜಾತ್ಯಾತೀತತೆ, ಪ್ರಜಾಪ್ರಭುತ್ವ ಮುಂತಾದ ವಿಷಯಗಳನ್ನು ಒಳಗೊಂಡ ಪಠ್ಯವನ್ನು ಕಡಿತ ಮಾಡುತ್ತಿದೆ. ಈ ನಿರ್ಧಾರದಿಂದ ಹಿಂದಕ್ಕೆ ಸರಿಯಬೇಕು, ಇಲ್ಲದಿದ್ದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡುವುದಾಗಿ ಪ್ರತಿಭಟನಾಕಾರರು ಎಚ್ಚರಿಕೆ ನೀಡಿದರು.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss