ಹೊಸದಿಗಂತ ಆನ್ಲೈನ್ ಡೆಸ್ಕ್:
ಪತಿ ಸಾವಿನ ಸುದ್ದಿ ಕೇಳಿ ಪತ್ನಿಯೂ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ಚಿಕ್ಕಮಗಳೂರಿನ ಕಳಸಾಪುರ ಸಮೀಪದ ಗಾಳಿಹಳ್ಳಿಯ ದೊಡ್ಡ ರಾಜಣ್ಣ ಅನಾರೋಗ್ಯದಿಂದ ಮೃತಪಟ್ಟಿದ್ದಾರೆ. ಪತಿಯ ನಿಧನದ ಸುದ್ದಿ ಕೇಳಿ ಪತ್ನಿ ರುದ್ರಮ್ಮ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ರಾಜಣ್ಣ ಅವರು ಅನಾರೋಗ್ಯದಿಂದ ಬಳಲುತ್ತಿದ್ದು, ಸಂಬಂಧಿಕರು ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು. ಮನೆಯಲ್ಲಿದ್ದ ರುದ್ರಮ್ಮನಿಗೆ ವಿಷಯ ತಿಳಿದ ತಕ್ಷಣ ಹೃದಯಾಘಾತವಾಗಿದೆ. ಇಬ್ಬರನ್ನೂ ಕಳೆದುಕೊಂಡ ದುಃಖದಲ್ಲಿರುವ ಕುಟುಂಬಸ್ಥರು ಇಬ್ಬರ ಅಂತ್ಯಕ್ರಿಯೆಯನ್ನು ಒಟ್ಟಿಗೆ ನಡೆಸಲು ನಿರ್ಧರಿಸಿದ್ದಾರೆ.