spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Saturday, December 4, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಪತ್ನಿ ಹಾಗೂ ಅತ್ತೆಯನ್ನು ಕೊಲೆ ಮಾಡಿ, ಆತ್ಮಹತ್ಯೆ ಮಾಡಿಕೊಂಡ ಉದ್ಯಮಿ: ಕೌಟುಂಬಿಕ ಕಲಹವೇ ಕಾರಣ

- Advertisement -Nitte

ಬೆಂಗಳೂರು: ಬೆಂಗಳೂರು ಮೂಲದ ಉದ್ಯಮಿಯೊಬ್ಬ ಕುಟುಂಬ ಕಲಹದ ಕಾರಣ ಬೆಂಗಳೂರಿನಲ್ಲಿ ಪತ್ನಿಯನ್ನು ಕೊಂದು ಕೊಲ್ಕತ್ತಾದಲ್ಲಿ ಅತ್ತೆಯನ್ನ ಕೊಂದು ನಂತರ ತಾನೇ ಆತ್ಮಹತ್ಯೆಗೆ ಶರಣಾಗಿದ್ದಾನೆ.
ಬೆಂಗಳೂರಿನಲ್ಲಿ ಪತ್ನಿಯನ್ನು ಕೊಂದು ನಂತರ ವಿಮಾನದ ಮೂಲಕ ಕೋಲ್ಕತ್ತಾಗೆ ತೆರಳಿ ಅಲ್ಲಿ ಅತ್ತೆಯನ್ನು ಗುಂಡಿಕ್ಕಿ ಕೊಂದು ನಂತರ ತಾನೂ ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟಿರುವ ಭಯಾನಕ ಘಟನೆ ಬೆಳಕಿಗೆ ಬಂದಿದೆ.
42 ವರ್ಷದ ಅಮಿತ್ ಅಗರ್ವಾಲ್ ತನ್ನ ಪತ್ನಿ ಶಿಲ್ಪಿ ಧಂಧಾನಿಯಾ ಅವರನ್ನು ಬೆಂಗಳೂರಿನ ಮಹದೇವಪುರ ನಿವಾಸದಲ್ಲಿ ಕೊಲೆ ಮಾಡಿದ್ದಾನೆ. ನಂತರ ಕೋಲ್ಕತ್ತಾಗೆ ಹೋಗಿ ಅತ್ತೆ ಲಲಿತ ಧಂಧಾನಿಯಾ ಅವರನ್ನು ಶೂಟ್ ಮಾಡಿ ಕೊಂದಿದ್ದಾನೆ. ನಂತರ ತಾನೂ ಅದೇ ಪಿಸ್ತೂಲ್‌ ಮೂಲಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಕೊಲ್ಕೊತ್ತಾ ಪೊಲೀಸರ ಮಾಹಿತಿ ಮೇರೆಗೆ ಮಹಾದೇವಪುರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಮಾಹಿತಿ ಪಡೆದ ಪೊಲೀಸರು ಆತ ವಾಸವಿದ್ದ ಅಪಾರ್ಟ್ ಮೆಂಟ್ ಗೆ ಹೋಗಿ ಪರಿಶೀಲನೆ ನಡೆಸಿದ್ದಾರೆ, ಶಿಲ್ಪಿ ಅಗರ್ ವಾಲ್ ಮೃತದೇಹ ಅಡುಕೋಣೆಯಲ್ಲಿ ಬಿದ್ದಿರುವುದನ್ನ ಬೆಂಗಳೂರು ಪೊಲೀಸರು ಪತ್ತೆಹಚ್ಚಿದ್ದಾರೆ.
ಪೊಲೀಸರು ಮನೆ ಸುತ್ತ ಮುತ್ತ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಪೊಲೀಸರಿಗೆ ಅಮಿತ್‌ ಬ್ಯಾಗಿನಲ್ಲಿ ಮರಣ ಪತ್ರ ಸಿಕ್ಕಿದೆ. ಇದರಲ್ಲಿ ತನ್ನ ಪತ್ನಿಯನ್ನ ಕೊಂದಿರುವುದಾಗಿ ಅಮಿತ್‌ ತಿಳಿಸಿದ್ದ. ಸದ್ಯ ಬೆಂಗಳೂರು ಹಾಗೂ ಕೊಲ್ಕತ್ತಾ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪ್ರಾಥಮಿಕವಾಗಿ ಕೊಲೆಗೆ ಕೌಟುಂಬಿಕ ಕಲಹವೇ ಕಾರಣ ಎಂಬುದು ತಿಳಿದುಬಂದಿದೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss