Saturday, July 2, 2022

Latest Posts

ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಗಳ ಚುನಾವಣೆ ಮುಂದೂಡಿಕೆ: ಕುಬೇರಪ್ಪ ಖಂಡನೆ

ಹಾವೇರಿ: ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಗಳಿಗೆ ಇದೇ ತಿಂಗಳು ಜರುಗಬೇಕಿದ್ದ ಚುನಾವಣೆಗಳನ್ನು ಮುಂದೂಡಿರುವ ಸರ್ಕಾರ ಮತ್ತು ಚುನಾವಣಾ ಆಯೋಗದ ಕ್ರಮವನ್ನು ಕೆಪಿಸಿಸಿ ಶಿಕ್ಷಕರು ಹಾಗೂ ಪದವಿಧರ ಘಟಕದ ರಾಜ್ಯಾಧ್ಯಕ್ಷ ಮತ್ತು ಕರ್ನಾಟಕ ಪಶ್ಚಿಮ ಪದವೀಧರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ. ಆರ್.ಎಂ.ಕುಬೇರಪ್ಪ ಖಂಡಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಈ ಕ್ಷೆತ್ರದ ಚುನಾವಣೆಗಳನ್ನು ಮುಂದೂಡುವುದಕ್ಕೆ ಕೋವಿಡ್ ಕಾರಣವನ್ನು ನೀಡಿರುವುದು ಸರಿಯಾದ ಕ್ರಮವಲ್ಲ. ಪದವಿಧರ ಮತ್ತು ಶಿಕ್ಷಕರ ಕ್ಷೇತ್ರಗಳಲ್ಲಿ ಮತದಾರರ ಸಂಖ್ಯೆ ತುಂಬಾ ಕಡಿಮೆ ಇದ್ದು ಪ್ರತಿಯೊಂದು ಮತಗಟ್ಟೆಯಲ್ಲಿ ೧೫೦ ರಿಂದ ೫೦೦ ಮತದಾರರಿದ್ದಾರೆ ಬೆಳಿಗ್ಗೆ ೭ ರಿಂದ ಸಂಜೆ ೫ ಗಂಟೆವರೆಗೆ ಜರಗುವ ಮತದಾನದಲ್ಲಿ ೩-೪ ಜನರಿಗಿಂತ ಹೆಚ್ಚು ಮತದಾರರು ಮತದಾನ ಮಾಡುವ ಸಾಧ್ಯತೆ ಹೆಚ್ಚು ಆದ್ದರಿಂದ ಕೋವಿಡ್ ನಿಯಮವನ್ನು ಉಲ್ಲಂಘನೆ ಆಗುವ ಸಾಧ್ಯತೆ ಬಹಳ ಕಡಿಮೆ ಆದ್ದರಿಂದ ಕೋವಿಡ್ ಕಾರಣ ನೀಡಿ ಈ ಎರಡೂ ಕ್ಷೇತ್ರಗಳ ಚುನಾವಣೆಗಳನ್ನು ಮುಂದೂಡುವ ಸರ್ಕಾರ ಮತ್ತು ಚುನಾವಣಾ ಆಯೋಗದ ಕ್ರಮ ಸರಿಯಾದುದಲ್ಲ ಎಂದು ತಿಳಿಸಿದ್ದಾರೆ.
ಈ ಚುನಾವಣೆಗಳನ್ನು ಮುಂದೂಡುತ್ತಿರುವುದನ್ನು ಗಮನಿಸಿದರೆ ಸರ್ಕಾರ ಚುನಾವಣೆಯಲ್ಲಿ ಸೋಲುವ ಭಯ ಕಾಡುತ್ತಿದೆ ಎನ್ನುವುದು ಇದರಿಂದ ಅರ್ಥವಾಗುತ್ತಿದೆಯಲ್ಲದೆ ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಅಣಕಿಸುವಂತಿದೆ ಎಂದಿರುವರು.
ವಿಧಾನಪರಿಷತ್‌ನಿಂದ ಚುನಾಯಿತರಾಗುವ ರಾಜ್ಯಸಭಾ ಚುನಾವಣೆಗೆ ಚುನಾವಣಾ ಆಯೋಗ ಅನುಮತಿ ನೀಡಿರುವಾಗ ಈ ಚುನಾವಣೆಗೆ ಏಕೆ ಅನುಮತಿ ನೀಡಲಿಲ್ಲ ಎಂದು ಪ್ರಾಶ್ನಿಸಿದ್ದಾರಲ್ಲದೆ ರಾಜ್ಯಸಭಾ ಚುನಾವಣೆಗೆ ನಾಮ ಪತ್ರ ಸಲ್ಲಿಸುವ ಸಂದರ್ಭದಲ್ಲಿ ಗುಂಪು ಗುಂಪಾಗಿ ತೆರಳಿ ನಾಮಪತ್ರ ಸಲ್ಲಿಸಿರುವು ಮತ್ತು ಕೋವಿಡ್ ನಿಯಮಗಳನ್ನು ಉಲ್ಲಂಘನೆ ಮಾಡಲಾಗಿದೆ. ಇದಲ್ಲದೆ ರಾಜ್ಯದ ಸರ್ಕಾರದ ಸಚಿವರು ಸೇರಿದಂತೆ ಅನೇಕರು ಕೋವಿಡ್ ನಿಯಮವನ್ನು ಉಲ್ಲಂಘಿಸಿದ್ದಾರೆ. ಆದರೆ ಡಿ.ಕೆ.ಶಿವಕುಮಾರ ಅವರ ಪದಗ್ರಹಣ ಕಾರ್ಯಕ್ರಮಕ್ಕೆ ಸರ್ಕಾರ ಅನುಮತಿ ನಿರಾಕರಣೆ ಮಾಡುವುದರ ಹಿಂದೆ ಸರ್ಕಾರ ರಾಜಕಾರಣ ಮಾಡುತ್ತಿದೆ ಎಂದು ಅವರು ಆಪಾಸಿದ್ದಾರಲ್ಲದೆ ಜುಲೈ ತಿಂಗಳಲ್ಲಿ ಈ ಎರಡೂ ಕ್ಷೇತ್ರಗಳ ಚುನಾವಣೆಯನ್ನು ಜರುಗಿಸುವಂತೆ ಅವರು ಮೂಖ್ಯಮಂತ್ರಿ, ರಾಜ್ಯ ಮತ್ತು ಕೇಂದ್ರ ಚುನಾವಣಾ ಆಯೋಗವನ್ನು ಆಗ್ರಹಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss