ಹೊಸ ದಿಗಂತ ಆನ್ ಲೈನ್ ಡೆಸ್ಕ್:
ರಾಜ್ಯದಲ್ಲಿ ಅಕ್ರಮ ಗಣಿಗಾರಿಕೆಗೆ ಯಾವುದೇ ರೀತಿಯ ಅವಕಾಶವಿಲ್ಲ. ತಕ್ಷಣ ಅಕ್ರಮ ಗಣಿಗಾರಿಕೆ ನಿಲ್ಲಿಸಿ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೂಚಿಸಿದ್ದಾರೆ.
ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ರಾಜ್ಯದಲ್ಲಿ ಇನ್ಮುಂದೆ ಅಕ್ರಮ ಗಣಿಗಾರಿಕೆಗೆ ಅವಕಾಶ ನೀಡುವುದಿಲ್ಲ. ಪರವಾನಗಿ ಇದ್ದರೆ ಮಾತ್ರ ಗಣಿಗಾರಿಕೆ ನಡೆಸಲು ಅವಕಾಶ ಮಾಡಿಕೊಡಲಾಗುವುದು ಎಂದಿದ್ದಾರೆ.
ಕಲ್ಲು ಗಣಿಗಾರಿಕೆ ನಿಲ್ಲಿಸಲು ಸಾಧ್ಯವಿಲ್ಲ. ರಾಜ್ಯ ಹಾಗೂ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಯುತ್ತಿರುವುದರಿಂದ ಕಲ್ಲು ಗಣಿಗಾರಿಕೆ ಅಗತ್ಯ. ಹಾಗೆಂದು ಅಕ್ರಮ ಗಣಿಗಾರಿಕೆ ನಡೆಸಿದರೆ ಸುಮ್ಮನಿರಲು ಸಾಧ್ಯವಿಲ್ಲ. ಅನುಮತಿ ಪಡೆದು ಗಣಿಗಾರಿಕೆ ನಡೆಸಿ ಎಂದು ಎಚ್ಚರಿಕೆ ನೀಡಿದ್ದಾರೆ.