Wednesday, August 17, 2022

Latest Posts

ಪರಿಸರ ಸಮತೋಲನ ಕಾಪಾಡುವ ನಿಟ್ಟಿನಲ್ಲಿ ಆನೆಗಳ ಮಹತ್ವವನ್ನು ಅರಿಯಬೇಕಿದೆ: ಮೈಸೂರು ವಿವಿ ಕುಲಪತಿ ಪ್ರೊ.ಹೇಮಂತ್‌ಕುಮಾರ್

ಮೈಸೂರು: ಪರಿಸರ ಸಮತೋಲನ ಕಾಪಾಡುವ ನಿಟ್ಟಿನಲ್ಲಿ ಆನೆಗಳ ಮಹತ್ವವನ್ನು ಅರಿಯಬೇಕಿದೆ ಎಂದು ಮೈಸೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಹೇಮಂತ್‌ಕುಮಾರ್ ತಿಳಿಸಿದರು.

ಬುಧವಾರ ಮೈಸೂರು ವಿವಿ ವಿಜ್ಞಾನ ಭವನದಲ್ಲಿ ವಿಶ್ವ ಆನೆಗಳ ದಿನದ ಅಂಗವಾಗಿ ಅರಣ್ಯ ಇಲಾಖೆ ಸಹಯೋಗದೊಂದಿಗೆ ಮೈಸೂರು ವಿಶ್ವವಿದ್ಯಾಲಯದ ವತಿಯಿಂದ ಆಯೋಜಿಸಲಾಗಿದ್ದ ವೆಬಿನಾರ್ ನಲ್ಲಿ ಪಾಲ್ಗೊಂಡು ಮಾತನಾಡಿದ ಅವರು,
ಇತ್ತೀಚಿನ ದಿನಗಳಲ್ಲಿ ಅಭಿವೃದ್ಧಿ ಹೆಸರಿನಲ್ಲಿ ಅರಣ್ಯ ನಾಶ ಪಡಿಸುತ್ತಿರುವುದು ಮಾನವ-ಕಾಡಾನೆಗಳ ನಡುವಿನ ಸಂಘರ್ಷಕ್ಕೆ ಕಾರಣವಾಗಿದೆ. ಆನೆಗಳ ಪ್ರದೇಶಕ್ಕೆ ಮಾನವ ಕಾಲಿಡುತ್ತಿರುವುದರಿಂದಲೇ ಅವು ನಾಡು ಪ್ರವೇಶಿಸುತ್ತಿವೆ. ಇದರಿಂದ ಬೆಳೆ ಹಾನಿ, ಆಸ್ತಿ ಪಾಸ್ತಿಗೆ ನಷ್ಟ ಉಂಟು ಮಾಡುತ್ತಿದೆ. ಈ ನಿಟ್ಟಿನಲ್ಲಿ ಅರಣ್ಯ ಇಲಾಖೆಯೊಂದಿಗೆ ಕೈ ಜೋಡಿಸಿ ಕಾಡನ್ನು ಸಂರಕ್ಷಿಸಬೇಕಿದೆ ಎಂದು ಹೇಳಿದರು.

ಆನೆಗಳ ವೈರುದ್ಯ, ಭಾರತದಲ್ಲಿ ಆನೆಗಳಿಗಿರುವ ಗೌರವಯುತ ಸ್ಥಾನ ಮತ್ತಿತರ ವಿಷಯಗಳ ಕುರಿತು ಮಾತನಾಡಿದ ಕುಲಪತಿಗಳು, ಬುದ್ಧಿವಂತ ಪ್ರಾಣಿ ಆನೆಗಳ ಸಂತತಿಯನ್ನು ಸಂರಕ್ಷಿಸಬೇಕಾದ ಅನಿವಾರ್ಯತೆ ಕುರಿತು ಹೇಳಿದರು. ಇದೇ ವೇಳೆ ಕ್ವಿಜ್ ಸ್ಪರ್ಧೆಗೂ ಚಾಲನೆ ನೀಡಲಾಯಿತು. ಐಎಫ್ ಎಸ್ ಅಧಿಕಾರಿ ಬಾಲಚಂದ್ರ, ಪ್ರೊ.ರಾಮಚಂದ್ರ, ಪ್ರೊ.ಮಾಲಿನಿ ಇತರರು ಪಾಲ್ಗೊಂಡಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!