Saturday, July 2, 2022

Latest Posts

ಪರಿಸ್ಥಿತಿ ಸುಧಾರಿಸುವವರೆಗೂ ಶಾಲೆಗಳನ್ನು ಪ್ರಾರಂಭ ಮಾಡುವುದಿಲ್ಲ: ಮುಖ್ಯಮಂತ್ರಿ ಕೇಜ್ರಿವಾಲ್

ಹೊಸದಿಲ್ಲಿ: ರಾಷ್ಟ್ರರಾಜಧಾನಿಯಲ್ಲಿ ಕೊರೋನಾ ವೃರಸ್ ಸುಧಾರಿತ ಪರಿಸ್ಥಿತಿಗೆ ಬರುವವರೆಗೆ ಶಾಲೆಗಳನ್ನು ತೆರೆಯುವುದಿಲ್ಲ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.

ದೆಹಲಿ ಸಚಿವಾಲಯದಲ್ಲಿ ತಮ್ಮ ಸ್ವಾತಂತ್ರ್ಯ ದಿನದ ಭಾಷಣ ಮಾಡಿದ ಕೇಜ್ರಿವಾಲ್, ರಾಷ್ಟ್ರ ರಾಜಧಾನಿಯಲ್ಲಿನ ಕೊರೋನಾ ಪರಿಸ್ಥಿತಿ ಎರಡು ತಿಂಗಳ ಹಿಂದಿನ ಸ್ಥಿತಿಗೆ ಹೋಲಿಸಿದರೆ ಈಗ ಕೊರೋನಾ ನಿಯಂತ್ರಣದಲ್ಲಿದೆ ಎಂದರು.

ಕೇಂದ್ರ ಸರ್ಕಾರ, ಕೊರೋನಾ ವಾರಿಯರ್ಸ್ ಮತ್ತು ವಿವಿಧ ಸಂಘಟನೆಗಳು ಸೇರಿದಂತೆ ಎಲ್ಲರಿಗೂ ಧನ್ಯವಾದ ತಿಳಿಸಿದರು. ಕೇಜ್ರಿವಾಲ್ ಸರ್ಕಾರಕ್ಕೆ ಶಾಲಾ ಮಕ್ಕಳ ಸುರಕ್ಷತೆ ಮತ್ತು ಆರೋಗ್ಯ ಬಹಳ ಮುಖ್ಯ ಎಂದು ಮುಖ್ಯಮಂತ್ರಿ ಹೇಳಿದರು.

ನಾನು ಜನರನ್ನು ಭೇಟಿಯಾಗಿದ್ದೇನೆ ಮತ್ತು ಶಾಲೆಗಳನ್ನು ತೆರೆಯಬಾರದೆಂಬ ಸಂದೇಶ ಪಡೆದಿದ್ದೇನೆ. ಅವರ ಮಕ್ಕಳ ಬಗ್ಗೆ ನಾವು ಎಷ್ಟು ಕಾಳಜಿ ವಹಿಸುತ್ತೇವೆ ಎಂದು ನಾನು ಅವರಿಗೆ ಭರವಸೆ ನೀಡಲು ಬಯಸುತ್ತೇನೆ. ಸಂಪೂರ್ಣವಾಗಿ ಮನವರಿಕೆಯಾಗದಿದ್ದರೆ, ನಾವು ಶಾಲೆಗಳನ್ನು ತೆರೆಯಲು ಹೋಗುವುದಿಲ್ಲ ಎಂದು  ಹೇಳಿದರು.

ಕೊರೋನಾ ವೈರಸ್ ವಿರುದ್ಧದ ಹೋರಾಟದಲ್ಲಿ ದೆಹಲಿ ಮನೆ ಪ್ರತ್ಯೇಕತೆ ಮತ್ತು ಪ್ಲಾಸ್ಮಾ ಥೆರಪಿ ಪರಿಕಲ್ಪನೆಯನ್ನು ದೇಶಕ್ಕೆ ನೀಡಿದೆ. ದೆಹಲಿಯ ಆರ್ಥಿಕತೆಯನ್ನು ಮತ್ತೆ ಜಾರಿಗೆ ತರಲು ಪ್ರಯತ್ನಿಸಲಾಗುತ್ತಿದೆ ಎಂದು ಕೇಜ್ರಿವಾಲ್ ಹೇಳಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss