Friday, July 1, 2022

Latest Posts

ಮುಖ್ಯಮಂತ್ರಿ ಕೋವಿಡ್ ಪರಿಹಾರ ನಿಧಿಗೆ ತಿಂಗಳ ವೇತನ ನೀಡಿದ ಕಂಡಕ್ಟರ್!

ಧಾರವಾಡ: ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಹುಬ್ಬಳ್ಳಿ-ಧಾರವಾಡ ನಗರ ಸಾರಿಗೆ ವಿಭಾಗದ ಒಂದನೇ ಘಟಕದಲ್ಲಿ ನಿರ್ವಾಹಕರಾಗಿರುವ ನವಲಗುಂದ ತಾಲೂಕಿನ ಶಿರಕೋಳ ಗ್ರಾಮದ ಬಸವರಾಜ ನೀಲಪ್ಪ ಗಾಣಿಗೇರ ಅವರು ತಮ್ಮ ಒಂದು ತಿಂಗಳ ವೇತನದ ಮೊತ್ತ 25 ಸಾವಿರ ರೂ. ಹಣವನ್ನು ಮುಖ್ಯಮಂತ್ರಿ ಪರಿಹಾರ ನಿಧಿ (ಕೋವಿಡ್-19) ಗೆ ಜಿಲ್ಲಾಧಿಕಾರಿಗಳ ಮೂಲಕ ಅರ್ಪಿಸಿದರು.

ಚೆಕ್ ಸ್ವೀಕರಿಸಿದ ಜಿಲ್ಲಾಧಿಕಾ ದೀಪಾ ಚೋಳನ್, ಸಾರಿಗೆ ಸಂಸ್ಥೆಯ ಕಂಡಕ್ಟರ್ ಸ್ವಯಂ ಪ್ರೇರಣೆಯಿಂದ ಒಂದು ತಿಂಗಳ ವೇತನ ಈ ಸಂಕಷ್ಟದ ಸಂದರ್ಭದಲ್ಲಿ ಸರ್ಕಾರದ ಕೋವಿಡ್ ಪರಿಹಾರ ನಿಧಿಗೆ ನೀಡಿರುವುದು ಸಮಾಜಕ್ಕೆ ಮಾದರಿ. ಜಿಲ್ಲಾಡಳಿತ ಈ ಕಾರ್ಯವನ್ನು ಪ್ರಶಂಸೆ ಮಾಡುತ್ತದೆ ಎಂದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss