Thursday, August 11, 2022

Latest Posts

ಪರ್ಯಾಯವಾಗಿ ತಾತ್ಕಾಲಿಕ ಠಾಣೆ ತೆರೆದ ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ

ಉಡುಪಿ: ಜಿಲ್ಲೆಯಲ್ಲಿ ಮೂವರು ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ ಕೋವಿಡ್ -19 ಸೋಂಕು ತಗುಲಿರುವುದರಿಂದ ಅವರು ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್‌ ಠಾಣೆಗಳನ್ನು ಬಂದ್ ಮಾಡಿ, ಪ್ರವೇಶ ನಿರ್ಬಂಧಿಸಲಾಗಿದೆ.
ಕಾರ್ಕಳ ನಗರ ಠಾಣೆ‌, ಅದರ ಒತ್ತಿನಲ್ಲೇ ಇರುವ ಗ್ರಾಮಾಂತರ ಪೊಲೀಸ್ ಠಾಣೆ, ಅಜೆಕಾರು ಹಾಗೂ ಬ್ರಹ್ಮಾವರ ಠಾಣೆಗಳನ್ನು ಬಂದ್ ಮಾಡಲಾಗಿದೆ. ಮುಂದಿನ ಆದೇಶದ ವರೆಗೆ ಅಲ್ಲಿಗೆ ಯಾರಿಗೂ ಪ್ರವೇಶ ಇರುವುದಿಲ್ಲ. ಸದ್ಯ ಅವುಗಳನ್ನು ಸ್ಯಾನಿಟೈಸ್ ಮಾಡಿ, 48 ತಾಸುಗಳನ್ನು ಬಿಡಬೇಕಾಗಿದೆ.
ಭಾನುವಾರ ರಜೆ ಇರುವುದರಿಂದ ಸ್ಯಾನಿಟೈಸ್ ಮಾಡುವ ಕೆಲಸ ವಿಳಂಬವಾಗಿದೆ. ಆದ್ದರಿಂದ ತಾತ್ಕಾಲಿಕವಾಗಿ ಪರ್ಯಾಯ ಠಾಣೆಗಳನ್ನು ತೆರೆಯಲಾಗಿದೆ. ಅಜೆಕಾರು ಪೊಲೀಸ್ ಠಾಣೆಯನ್ನು ಮುಖ್ಯರಸ್ತೆಯಲ್ಲಿರುವ ಅಂಗನವಾಡಿ ಕಟ್ಟಡಕ್ಕೆ ಸ್ಥಳಾಂತರಿಸಲಾಗಿದೆ. ಕಾರ್ಕಳದ ನಗರ ಮತ್ತು ಗ್ರಾಮಾಂತರ ಪೊಲೀಸ್ ಠಾಣೆಗಳನ್ನು ಕಾರ್ಕಳ ಡಿಎಸ್ಪಿ ಕಚೇರಿಯ ಮುಂಭಾಗದಲ್ಲಿ ಪುರಸಭಾ ಭವನಕ್ಕೆ ಸ್ಥಳಾಂತರ ಮಾಡಲಾಗಿದೆ. ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಹಿಂಭಾಗದಲ್ಲಿರುವ ಹಳೆಯ ಪೊಲೀಸ್ ಠಾಣಾ ಕಟ್ಟಡಕ್ಕೆ ಸ್ಥಳಾಂತರ ಮಾಡಲಾಗಿದೆ. ಅಗತ್ಯವಿದ್ದರೆ ಸಾರ್ವಜನಿಕರು ಪರ್ಯಾಯವಾಗಿ ತೆರೆದಿರುವ ಈ ಠಾಣೆಗಳಿಗೆ ಭೇಟಿ ನೀಡಬಹುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್. ವಿಷ್ಣುವರ್ಧನ್ ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss