ಚೆನ್ನೈ: ಆಡಳಿತಾರೂಢ ಎಡಿಎಂಕೆಯ ಮುಖ್ಯಮಂತ್ರಿ ಎಡಪ್ಪಾಡಿ ಪಳನಿಸ್ವಾಮಿ ಅವರು ಮುಂದಿನ ವರ್ಷ ರಾಜ್ಯದಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಯ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಓ.ಪನ್ನೀರ್ ಸೆಲ್ವಂ ಘೋಷಿಸಿದ್ದಾರೆ.
ಕೆಲ ದಿನಗಳಿಂದ ಮುಖ್ಯಮಂತ್ರಿ ಪಳನಿಸ್ವಾಮಿ ಹಾಗೂ ಉಪಮುಖ್ಯಮಂತ್ರಿ ಪನ್ನೀರ್ ಸೆಲ್ವಂ ಮಧ್ಯೆ ಭಿನ್ನಾಭಿಪ್ರಾಯವಿದೆ ಎಂಬ ಸುದ್ದಿ ಹರಿದಾಡಿತ್ತು. ಭಾರೀ ಕುತೂಹಲ ಕೆರಳಿಸಿದ್ದ ಸಿಎಂ ಅಭ್ಯರ್ಥಿ ಹೆಸರಿಗೆ ಕೊನೆಗೂ ತೆರೆ ಬಿದ್ದಿದೆ. ಸಾಲು ಸಾಲು ಸಭೆಗಳ ನಂತ ಬೆಳಗಿನ ಜಾವ 3:30ರವೆರಗೂ ಮಾತುಕತೆ ನಡೆದಿದೆ ಎನ್ನಲಾಗಿದೆ.